ತ್ರಿಕೋನ ಟಿ20: ಆಸ್ಟ್ರೇಲಿಯಾಗೆ ಸೋಲುಣಿಸಿದ ಪಾಕಿಸ್ತಾನ

Published : Jul 05, 2018, 05:32 PM IST
ತ್ರಿಕೋನ ಟಿ20: ಆಸ್ಟ್ರೇಲಿಯಾಗೆ ಸೋಲುಣಿಸಿದ ಪಾಕಿಸ್ತಾನ

ಸಾರಾಂಶ

ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಸೋಲು ಕಂಡು, ತ್ರಿಕೋನ ಏಕದಿನ ಸರಣಿಗಾಗಿ ಜಿಂಬಾಬ್ವೆಗೆ ಬಂದಿಳಿದ ಆಸ್ಟ್ರೇಲಿಯಾಗೆ ಹೆಚ್ಚಿನ ಯಶಸ್ಸು ಸಿಕ್ಕಿಲ್ಲ. ಜಿಂಬಾಬ್ವೆ ವಿರುದ್ಧ ದಾಖಲೆ ಗೆಲುವು ಸಾಧಿಸಿದ ಆಸಿಸ್, ಇದೀಗ ಪಾಕಿಸ್ತಾನ ವಿರುದ್ದ ಸೋಲು ಅನುಭವಿಸಿದೆ. ಈ ರೋಚಕ ಪಂದ್ಯದ ಹೈಲೈಟ್ಸ್ ಇಲ್ಲಿದೆ.

ಹರಾರೆ(ಜು.05): ಜಿಂಬಾಬ್ವೆಯ ಹರಾರೆಯಲ್ಲಿ ನಡೆಯುತ್ತಿರುವ ತ್ರಿಕೋನ ಟಿ20 ಸರಣಿಯಲ್ಲಿ ಪಾಕಿಸ್ತಾನ ಗೆಲುವಿನ ಓಟ ಮುಂದುವರಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ 45 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಜಿಂಬಾಬ್ವೆ, ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ನಡುವಿನ ತ್ರಿಕೋನ ಟಿ20 ಸರಣಿಯಲ್ಲಿ ಪಾಕ್ ಹಾಗೂ ಆಸ್ಟ್ರೇಲಿಯಾ ಈಗಾಗಲೇ ಫೈನಲ್ ತಲುಪಿದೆ. ತ್ರಿಕೋನ ಸರಣಿಯ 5ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ನಿಗಧಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 194 ರನ್ ಸಿಡಿಸಿತು. ಫಕರ್ ಜಮೀನ್ 73 ರನ್ ಸಿಡಿಸಿದರೆ, ಆಸಿಫ್ ಆಲಿ 37 ರನ್‌ಗಳ ಕಾಣಿಕೆ ನೀಡಿದರು.

195 ರನ್ ಟಾರ್ಗೆಟ್ ಪಡೆದ ಆಸ್ಟ್ರೇಲಿಯಾ ಶಹೀನ್ ಆಫ್ರಿದಿ ದಾಳಿಗೆ ತತ್ತರಿಸಿತು. ಜಿಂಬಾಬ್ವೆ ವಿರುದ್ಧ ವಿಶ್ವದಾಖಲೆ ನಿರ್ಮಿಸಿದ್ದ ನಾಯಕ ಆರೋನ್ ಫಿಂಚ್ ಕೇವಲ 16 ರನ್‌ಗಳಿಸಿ ಔಟಾದರು. ಅಲೆಕ್ಸ್ ಕ್ಯಾರಿ 37 ರನ್‌ಗಳ ಕಾಣಿಕೆ ಹೊರತು ಪಡಿಸಿದರೆ, ಇನ್ಯಾವ ಬ್ಯಾಟ್ಸ್‌ಮನ್‌ಗಳಿಂದ ಉತ್ತಮ ಹೋರಾಟ ನೀಡಲಿಲ್ಲ. ಹೀಗಾಗಿ ಆಸ್ಟ್ರೇಲಿಯಾ 7 ವಿಕೆಟ್ ಕಳೆದುಕೊಂಡುು 149 ರನ್ ಸಿಡಿಸಿ ಸೋಲೊಪ್ಪಿಕೊಂಡಿತು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?
ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ