ಟೀಂ ಇಂಡಿಯಾ ಖ್ಯಾತ ಕ್ರಿಕೆಟಿಗ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ

By Web Desk  |  First Published Sep 18, 2019, 11:20 AM IST

ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ್ದಾರೆ. ಬರೋಬ್ಬರಿ 12 ವರ್ಷಗಳ ಹಿಂದೆ ಕೊನೆಯ ಬಾರಿಗೆ ಟೀಂ ಇಂಡಿಯಾ ಪ್ರತಿನಿಧಿಸಿದ್ದ ಇವರು, ಇದೀಗ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ದೂರ ಸರಿದಿದ್ದಾರೆ. ಅಷ್ಟಕ್ಕೂ ಯಾರು ಆ ಕ್ರಿಕೆಟಿಗ..? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್...


ನವದೆಹಲಿ[ಸೆ.18]: ಭಾರತದ ಮಾಜಿ ಆಲ್ರೌಂಡರ್ ದಿನೇಶ್ ಮೊಂಗಿಯಾ, 3 ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮಂಗಳವಾರ ನಿವೃತ್ತಿ ಘೋಷಿಸಿದ್ದಾರೆ. 

ಧೋನಿ IPL ಭವಿಷ್ಯ; CSK ಮಾಲೀಕ ಬಿಚ್ಚಿಟ್ಟ ಸೀಕ್ರೆಟ್!

Cricket: Former India all-rounder Dinesh Mongia, member of the Indian team which finished runner-up in the 2003 World Cup, announced his retirement from all formats of cricket pic.twitter.com/kTja9LaLRr

— Doordarshan Sports (@ddsportschannel)

Tap to resize

Latest Videos

undefined

2001ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಮೊಂಗಿಯಾ, 2007ರಲ್ಲಿ ಬಾಂಗ್ಲಾದೇಶ ವಿರುದ್ಧ ಕೊನೆಯ ಪಂದ್ಯವನ್ನಾಡಿದ್ದರು. ಇದಾಗಿ 12 ವರ್ಷಗಳ ಬಳಿಕ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ದಾರೆ. 

T20 ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ ಮಿಥಾಲಿ ರಾಜ್

1995ರಲ್ಲಿ ಅಂಡರ್ 19 ಪಂದ್ಯದಲ್ಲಿ ಪಂಜಾಬ್ ತಂಡವನ್ನು ಪ್ರತಿನಿಧಿಸಿದ್ದ ಮೊಂಗಿಯಾ ಸತತ ಆರು ವರ್ಷಗಳ ಸ್ಥಿರ ಪ್ರದರ್ಶನದಿಂದಾಗಿ 2001ರಲ್ಲಿ ಟೀಂ ಇಂಡಿಯಾದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಯಶಸ್ವಿಯಾಗಿದ್ದರು. ಮೊಂಗಿಯಾ 57 ಏಕದಿನ ಪಂದ್ಯಗಳನ್ನಾಡಿ 1230 ರನ್ ಬಾರಿಸಿದ್ದಾರೆ. ಅದರಲ್ಲೂ ಮಾರ್ಚ್ 2002ರಲ್ಲಿ ಜಿಂಬಾಬ್ವೆ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಮೊಂಗಿಯಾ ಅಜೇಯ 159 ರನ್ ಬಾರಿಸಿದ್ದರು. ಇದರ ಜತೆಗೆ 2003ರ ಏಕದಿನ ವಿಶ್ವಕಪ್ ತಂಡದಲ್ಲೂ ಸ್ಥಾನ ಪಡೆದಿದ್ದರು. 2006ರಲ್ಲಿ ದ.ಆಫ್ರಿಕಾ ವಿರುದ್ಧ ನಡೆದಿದ್ದ ಭಾರತ ತಂಡದ ಚೊಚ್ಚಲ ಟಿ20 ಪಂದ್ಯದಲ್ಲಿ ಮೊಂಗಿಯಾ ಆಡಿದ್ದರು. ಇನ್ನು 121 ಪ್ರಥಮ ದರ್ಜೆ, 198 ಲಿಸ್ಟ್ ‘ಎ’ ಪಂದ್ಯಗಳನ್ನಾಡಿದ್ದು, ಇದರಲ್ಲಿ 21 ಶತಕಗಳು ಸೇರಿವೆ. 

click me!