ವಿರಾಟ್ ಕೊಹ್ಲಿ ಮುಡಿಗೆ ಮತ್ತೊಂದು ದಾಖಲೆ ಸೇರ್ಪಡೆ

Published : Aug 31, 2018, 05:07 PM ISTUpdated : Sep 09, 2018, 10:12 PM IST
ವಿರಾಟ್ ಕೊಹ್ಲಿ ಮುಡಿಗೆ ಮತ್ತೊಂದು ದಾಖಲೆ ಸೇರ್ಪಡೆ

ಸಾರಾಂಶ

ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಆಡುತ್ತಿರುವ ವಿರಾಟ್ ಕೊಹ್ಲಿಗೆ ಆರು ಸಾವಿರ ರನ್ ಪೂರೈಸಲು ಕೇವಲ 6 ರನ್’ಗಳ ಅವಶ್ಯಕತೆಯಿತ್ತು. ಜೇಮ್ಸ್ ಆ್ಯಂಡರ್’ಸನ್ ಬೌಲಿಮಗ್’ನಲ್ಲಿ ಬೌಂಡರಿ ಬಾರಿಸುವುದರೊಂದಿಗೆ ಆರು ಸಾವಿರ ರನ್ ಪೂರೈಸಿದ್ದಾರೆ.

ಸೌತಾಂಪ್ಟನ್[ಆ.30]: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್’ನಲ್ಲಿ 6 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಭಾರತ ಪರ ಆರು ಸಾವಿರ ರನ್ ಪೂರೈಸಿದ 10ನೇ ಕ್ರಿಕೆಟಿಗ ಎನ್ನುವ ಕೀರ್ತಿಗೆ ಕೊಹ್ಲಿ ಪಾತ್ರರಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಆಡುತ್ತಿರುವ ವಿರಾಟ್ ಕೊಹ್ಲಿಗೆ ಆರು ಸಾವಿರ ರನ್ ಪೂರೈಸಲು ಕೇವಲ 6 ರನ್’ಗಳ ಅವಶ್ಯಕತೆಯಿತ್ತು. ಜೇಮ್ಸ್ ಆ್ಯಂಡರ್’ಸನ್ ಬೌಲಿಮಗ್’ನಲ್ಲಿ ಬೌಂಡರಿ ಬಾರಿಸುವುದರೊಂದಿಗೆ ಆರು ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಸುನಿಲ್ ಗವಾಸ್ಕರ್ ಬಳಿಕ ಅತಿವೇಗವಾಗಿ 6 ಸಾವಿರ ರನ್ ಪೂರೈಸಿದ ಟೀಂ ಇಂಡಿಯಾ ಬ್ಯಾಟ್ಸ್’ಮನ್ ಎನ್ನುವ ಶ್ರೇಯಕ್ಕೆ ಕೊಹ್ಲಿ ಪಾತ್ರರಾಗಿದ್ದಾರೆ.

ಸುನಿಲ್ ಗವಾಸ್ಕರ್ 117 ಇನ್ನಿಂಗ್ಸ್’ಗಳಲ್ಲಿ 6 ಸಾವಿರ ರನ್ ಪೂರೈಸಿದ್ದರೆ, ಕೊಹ್ಲಿ 119 ಇನ್ನಿಂಗ್ಸ್’ಗಳಲ್ಲಿ ಈ ಸಾಧನೆ ಮಾಡಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಲಂಬೋ ಟೆಸ್ಟ್‌ ವಿರಾಟ್ ಕೊಹ್ಲಿ ಆಡಿದ್ರೆ ಫಲಿತಾಂಶ ಬೇರೆಯದ್ದೇ ಆಗಿರ್ತಿತ್ತು ಎಂದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ!
'ಕೌಂಟಿ ಕ್ರಿಕೆಟ್‌ನ ಸೆಕೆಂಡ್‌ ಡಿವಿಷನ್‌ ಟೀಮ್‌ ಇದ್ದ ಹಾಗಿದೆ' ಪಾಕ್‌ ತಂಡದ ಮರ್ಯಾದೆ ಹರಾಜು ಮಾಡಿದ ಇಂಗ್ಲೆಂಡ್‌ ಮಾಜಿ ನಾಯಕ!