
ಬೆಂಗಳೂರು[ನ.14]: ಇಂದು ದೇಶದಾದ್ಯಂತ ಸಡಗರ ಸಂಭ್ರಮದಿಂದ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಟೀಂ ಇಂಡಿಯಾದಲ್ಲಿ ಸ್ಟಾರ್’ಗಳಿರುವ ಆಟಗಾರರ ಮಕ್ಕಳು ಖುಷಿ-ಖುಷಿಯಾಗಿ ಮಕ್ಕಳ ದಿನಾಚರಣೆ ಆಚರಿಸಿಕೊಂಡರು.
ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗರು ಮಕ್ಕಳ ದಿನಾಚರಣೆಯ ಶುಭಕೋರಿದ್ದು, ಧೋನಿ ತಮ್ಮ ಮಗಳು ಝಿವಾ ಜೊತೆ ಹುಟ್ಟು ಹಬ್ಬ ಆಚರಿಸಿಕೊಂಡರೆ, ಧವನ್ ತಮ್ಮ ಮಗ ಜೋರಾವರ್ ಜತೆ ವಿಶೇಷವಾಗಿ ಮಕ್ಕಳ ಹಬ್ಬ ಆಚರಿಸಿಕೊಂಡಿದ್ದಾರೆ.
ಇನ್ನು ಹರ್ಭಜನ್ ಸಿಂಗ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಮಕ್ಕಳ ದಿನಾಚರಣೆಗೆ ಶುಭ ಕೋರಿದ್ದಾರೆ.
ಇದೇ ಸಂದರ್ಭದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟ್ವೀಟ್ ಮಾಡಿದ್ದು, ಈ ಐವರು ಕ್ರಿಕೆಟಿಗರು ಆರ್’ಸಿಬಿ ಪರ ಆಡುತ್ತಿದ್ದಾರೆ. ಅವರು ಯಾರೆಂದು ಗುರುತಿಸಿ ಎಂದು ಅಭಿಮಾನಿಗಳಿಗೆ ಚಾಲೆಂಜ್ ಹಾಕಿದೆ.
ಸುವರ್ಣನ್ಯೂಸ್ ಬಳಗ 1,4,5 ಫೋಟೋಗಳನ್ನು ಕ್ರಮವಾಗಿ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಹಾಗೂ ಯಜುವೇಂದ್ರ ಚಹಾಲ್ ಎಂದು ಗುರುತಿಸಿದ್ದು, ಇನ್ನಿಬ್ಬರನ್ನು ಕಂಡು ಹಿಡಿಯುವ ಅವಕಾಶವನ್ನು ಓದುಗರಿಗೆ ನೀಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.