ವೈಜಾಗ್ ಟೆಸ್ಟ್ ಪಂದ್ಯವನ್ನಾಡುತ್ತಿರುವ ಟೀಂ ಇಂಡಿಯಾ ಟೆಸ್ಟ್ ಉಪನಾಯಕ ಅಜಿಂಕ್ಯ ರಹಾನೆ ಪಾಲಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಡ್ಯಾಡಿ ಕ್ಲಬ್‌ಗೆ ಮುಂಬೈಕರ್ ಸೇರ್ಪಡೆಯಾಗಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
ಮುಂಬೈ[ಅ.05]: ಭಾರತ ಟೆಸ್ಟ್ ತಂಡದ ಉಪ ನಾಯಕ ಅಜಿಂಕ್ಯ ರಹಾನೆಹೆಣ್ಣು ಮಗುವಿಗೆ ತಂದೆಯಾಗಿದ್ದಾರೆ. ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಅದ್ಭುತ ಪ್ರದರ್ಶನದ ಮೂಲಕ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದ ರಹಾನೆ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನಾಡುತ್ತಿದ್ದಾರೆ. ಇದೀಗ ರಹಾನೆ ಪತ್ನಿ, ರಾಧಿಕಾ ದೋಪ್ವಾಕರ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
IPL 2020: ಹೊಸ ತಂಡದತ್ತ ಮುಖಮಾಡಿದ ರಹಾನೆ..?
undefined
ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಹರ್ಭಜನ್ ಸಿಂಗ್, ರಹಾನೆ ಕುಟುಂಬಕ್ಕೆ ಹೊಸ ಸದಸ್ಯನ ಎಂಟ್ರಿಯನ್ನು ಸಾಮಾಜಿಕ ಜಾಲತಾಣವಾದ ಟ್ವಿಟರ್’ನಲ್ಲಿ ಖಚಿತಪಡಿಸಿದ್ದಾರೆ. ಇದೇ ವರ್ಷದ ಜುಲೈನಲ್ಲಿ ರಹಾನೆ ದಂಪತಿ ಇನ್ ಸ್ಟಾಗ್ರಾಂ ಖಾತೆಯಲ್ಲಿ ಪ್ರಗ್ನೆನ್ಸಿ ವಿಚಾರವನ್ನು ತಿಳಿಸಿದ್ದರು.
ರಹಾನೆ-ರಾಧಿಕಾ ಜೋಡಿ, ಡಿಸೆಂಬರ್, 2014ರಲ್ಲಿ ಸಾಂಪ್ರದಾಯಿಕ ರೀತಿಯಲ್ಲೇ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಬಾಲ್ಯದ ಗೆಳತಿಯಾಗಿದ್ದ ರಾಧಿಕಾರನ್ನು ವರಿಸಿ 5 ವರ್ಷಗಳ ಬಳಿಕ ರಹಾನೆ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದೆ.
ನಾಯಕನಿಂದ ಕಡೆಗಣಿಸಲ್ಪಟ್ಟ ರಹಾನೆ ಈಗ ತಂಡದ ಸ್ಟಾರ್!
ರಹಾನೆಯಾಗಲಿ, ರಾಧಿಕಾ ಆಗಲಿ ಸಾಮಾಜಿಕ ಜಾಲತಾಣದ ಮೂಲಕ ಈ ವಿಚಾರವನ್ನು ತಿಳಿಸಿಲ್ಲ. ಆದರೆ ಭಾರತ-ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ದಿನದಾಟ ಆರಂಭವಾದ ಕೆಲಹೊತ್ತಿನಲ್ಲೇ ಹರ್ಭಜನ್ ಸಿಂಗ್ ಖಚಿತ ಪಡಿಸಿದ್ದಾರೆ. ’ತಂದೆಯಾಗಿದ್ದಕ್ಕೆ ರಹಾನೆಗೆ ಅಭಿನಂಧನೆಗಳು. ತಾಯಿ ಹಾಗೂ ಯುವರಾಣಿ ಚೆನ್ನಾಗಿದ್ದಾರೆ ಎಂದು ಭಾವಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.
Congratulations new daddy in town hope Mum and lil princess 👸 are doing well.. fun part of life starts now ajju.
— Harbhajan Turbanator (@harbhajan_singh)ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 431 ರನ್’ಗಳಿಗೆ ಆಲೌಟ್ ಮಾಡುವ ಮೂಲಕ ಟೀಂ ಇಂಡಿಯಾ 71 ರನ್’ಗಳ ಮುನ್ನಡೆ ಸಾಧಿಸಿತು. ಇನ್ನು ಎರಡನೇ ಇನಿಂಗ್ಸ್ ಆರಂಭಿಸಿರುವ ಭಾರತ 28.1 ಓವರ್ ಮುಕ್ತಾಯದ ವೇಳೆಗೆ 1 ವಿಕೆಟ್ ಕಳೆದುಕೊಂಡು 74 ರನ್ ಬಾರಿಸಿದ್ದು ಒಟ್ಟಾರೆ 145 ರನ್ ಮುನ್ನಡೆ ಸಾಧಿಸಿದೆ. ರೋಹಿತ್ ಶರ್ಮಾ 50 ರನ್ ಬಾರಿಸಿದ್ದು, ಪೂಜಾರ 16 ರನ್ ಬಾರಿಸಿ ಬ್ಯಾಟಿಂಗ್ ನಡೆಸುತ್ತಿದ್ದಾರೆ.