
ಹೈದರಾಬಾದ್[ಸೆ.15]: ಐಸಿಸಿ ಏಕದಿನ ವಿಶ್ವಕಪ್ಗೆ ಆಯ್ಕೆಯಾಗದಕ್ಕೆ ಬೇಸರಗೊಂಡು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ ಅಂಬಟಿ ರಾಯುಡು, ಇತ್ತೀಚೆಗಷ್ಟೇ ನಿವೃತ್ತಿಯಿಂದ ಹೊರಬಂದಿದ್ದರು. ಅವರಿಗೀಗ ಅದೃಷ್ಟ ಕೂಡಿಬಂದಿದೆ.
ವಿದಾಯ ನಿರ್ಧಾರ ಬದಲು; 2 ತಿಂಗಳ ಬಳಿಕ U ಟರ್ನ್ ಹೊಡೆದ ರಾಯುಡು!
ಹೌದು, ಮುಂಬರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಅಂಬಟಿ ರಾಯುಡುಗೆ ಹೈದರಾಬಾದ್ ತಂಡದ ನಾಯಕತ್ವ ಪಟ್ಟ ನೀಡಲಾಗಿದೆ. ಅಕ್ಷತ್ ರೆಡ್ಡಿ ಬದಲಿಗೆ ರಾಯುಡು ನಾಯಕನಾಗಿ ನೇಮಕಗೊಂಡಿದ್ದಾರೆ. ‘ರಾಯುಡು ಅವರಲ್ಲಿ ಇನ್ನೂ 5 ವರ್ಷ ಕ್ರಿಕೆಟ್ ಬಾಕಿ ಇದೆ’ ಎಂದು ಹೈದರಾಬಾದ್ ಕ್ರಿಕೆಟ್ ಸಂಸ್ಥೆಯ ಆಯ್ಕೆಗಾರ ನೋಲ್ ಡೇವಿಡ್ ಹೇಳಿದ್ದಾರೆ. ಈ ತಿಂಗಳು 24ರಿಂದ ವಿಜಯ್ ಹಜಾರೆ ಟೂರ್ನಿ ಆರಂಭಗೊಳ್ಳಲಿದೆ.
ವಿಜಯ್ ಹಜಾರೆ ಟ್ರೋಫಿಗೆ ದೆಹಲಿ ಸಂಭಾವ್ಯ ತಂಡ ಪ್ರಕಟ; ಕೊಹ್ಲಿಗೆ ಸ್ಥಾನ!
ಟೀಂ ಇಂಡಿಯಾದ ದಿಗ್ಗಜ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್, ಹೈದರಾಬಾದ್ ಕ್ರಿಕೆಟ್ ಸಂಸ್ಥೆಯ ಆಯ್ಕೆಗಾರ ನೋಲ್ ಡೇವಿಡ್ ಹಾಗೂ ಚೆನ್ನೈ ಸೂಪರ್’ಕಿಂಗ್ಸ್ ಆಡಳಿತ ಮಂಡಳಿ ರಾಯುಡು ನಿವೃತ್ತಿ ಹಿಂಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ರಾಯುಡು ಭಾರತ ಪರ 55 ಏಕದಿನ ಹಾಗೂ 6 ಟಿ20 ಪಂದ್ಯಗಳನ್ನಾಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.