ಟೀಂ ಇಂಡಿಯಾ ಕ್ರಿಕೆಟಿಗ, ಕ್ಯಾಪ್ಟನ್ ಕೂಲ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ಎಷ್ಟೊಂದು ಸಿಂಪಲ್ ಮನುಷ್ಯ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಕಾಶ್ಮೀರದಲ್ಲಿ ಗಡಿ ಕಾಯುತ್ತಿರುವ ಧೋನಿ, ಸಾಮಾನ್ಯ ಸೈನಿಕರಂತೆ ಕಾರ್ಯ ನಿರ್ವಹಿಸುತ್ತಿದ್ದು, ತಮ್ಮ ಬೂಟ್ ಗಳನ್ನು ತಾವೇ ಪಾಲಿಶ್ ಮಾಡಿಕೊಳ್ಳುತ್ತಿರುವ ಚಿತ್ರವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
ಶ್ರೀನಗರ[ಆ.07]: ಅರೆಸೇನಾ ಪಡೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆ ಹೊಂದಿರುವ ಭಾರತೀಯ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಜಮ್ಮು-ಕಾಶ್ಮೀರದಲ್ಲಿ ಸೇವೆ ಆರಂಭಿಸಿದ್ದು, ಅವರು ಇತರೆ ಸೈನಿಕರಂತೆ ಕೆಲಸ ಮಾಡುತ್ತಿದ್ದಾರೆ.
ವಾರದೊಳಗೆ ಕಾಶ್ಮೀರ ಸಮಸ್ಯೆ ಬಗೆಹರಿಸಿದ MSD
undefined
ತಾವೊಬ್ಬ ಜನಪ್ರಿಯ ಕ್ರಿಕೆಟಿಗ, ಸಾವಿರಾರು ಕೋಟಿ ಒಡೆಯ ಎಂಬ ಹಮ್ಮು-ಬಿಮ್ಮು ಬಿಟ್ಟು ಇತರೆ ಯೋಧರಂತೆ ಸಾಮಾನ್ಯ ಕೊಠಡಿಯಲ್ಲಿ ಕುಳಿತು ತಮ್ಮ ಬೂಟುಗಳನ್ನು ತಾವೇ ಪಾಲಿಶ್ ಮಾಡಿಕೊಳ್ಳುವ ಚಿತ್ರವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಯೋಧರಿಗೆ ಹಾಡಿನ ಮೂಲಕ ಸ್ಫೂರ್ತಿ ತುಂಬಿದ ಸೈನಿಕ ಧೋನಿ!
. winning our hearts with his simplicity & humbleness. ❤😊
No special privileges, No special protection. Because he is on national duty, just like our brave soldiers! pic.twitter.com/fNjplZdmi1
ಧೋನಿಗೆ ಯಾವುದೇ ವಿಶೇಷ ಸೌಲಭ್ಯ, ವಿಶೇಷ ಭದ್ರತೆ ಇಲ್ಲ. ಧೋನಿ ಅವರು ನಮ್ಮ ಇತರ ಯೋಧರಂತೆ ದೇಶ ಸೇವೆ ಮಾಡುತ್ತಿದ್ದಾರೆ. ಇದೇ ಕಾರಣಕ್ಕಾಗಿ ನಾನು ಧೋನಿ ಅಭಿಮಾನಿ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.