
ಚೆನ್ನೈ[ಆ.27]: ಭಾರತ ತಂಡದಿಂದ ಹೊರಬಿದ್ದಿರುವ ಆರಂಭಿಕ ಬ್ಯಾಟ್ಸ್‌ಮನ್ ಮುರಳಿ ವಿಜಯ್, ಇಂಗ್ಲೆಂಡ್ ಕೌಂಟಿ ಕ್ರಿಕೆಟ್‌ನಲ್ಲಿ ಸೋಮರ್‌ಸೆಟ್ ತಂಡದ ಪರ ಆಡಲಿದ್ದಾರೆ.
ಮಯಾಂಕ್ ಅರ್ಧಶತಕ-ರಾಹುಲ್,ವಿಜಯ್ ಫುಲ್ ಟ್ರೋಲ್!
ಈ ಋುತುವಿನಲ್ಲಿ ಇನ್ನು 3 ಪಂದ್ಯ ಬಾಕಿ ಇದ್ದು, ಅದರಲ್ಲಿ ಮುರಳಿ ವಿಜಯ್ ಆಡುವುದಾಗಿ ತಿಳಿಸಿದ್ದಾರೆ. ಪಾಕಿಸ್ತಾನದ ಅಜರ್ ಅಲಿ ಬದಲಿಗೆ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಆಸ್ಪ್ರೇಲಿಯಾ ವಿರುದ್ಧ ಪರ್ತ್’ನಲ್ಲಿ ವಿಜಯ್ ಭಾರತ ಪರ ಕೊನೆ ಬಾರಿ ಆಡಿದ್ದರು.
ಟೀಂ ಇಂಡಿಯಾದಿಂದ ನಿರ್ಲಕ್ಷ್ಯ- ವಿದೇಶಿ ಕ್ರಿಕೆಟ್‌ನತ್ತ ಸ್ಟಾರ್ ಸ್ಪಿನ್ನರ್!
35 ವರ್ಷದ ವಿಜಯ್ ಭಾರತ ಪರ 61 ಟೆಸ್ಟ್ ಪಂದ್ಯಗಳನ್ನಾಡಿ 38.28ರ ಸರಾಸರಿಯಲ್ಲಿ 3,982 ರನ್ ಬಾರಿಸಿದ್ದಾರೆ. 131 ಪ್ರಥಮ ದರ್ಜೆಯ ಪಂದ್ಯಾಗಳನ್ನಾಡಿ 42.79ರ ಸರಾಸರಿಯಲ್ಲಿ 9,116 ರನ್ ಬಾರಿಸಿದ್ದಾರೆ. ಕಳೆದ ಋತುವಿನಲ್ಲಿ ಎಸೆಕ್ಸ್ ಪರ ಕಣಕ್ಕಿಳಿದಿದ್ದ ಮುರಳಿ ವಿಜಯ್ 64.60 ಸರಾಸರಿಯಲ್ಲಿ 3 ಅರ್ಧಶತಕ ಹಾಗೂ 1 ಶತಕ ಸಿಡಿಸಿ ಮಿಂಚಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.