
ಹೈದರಾಬಾದ್(ಜು.31): ಆಂಧ್ರ ಪ್ರದೇಶ ರಣಜಿ ತಂಡದ ಮಾಜಿ ನಾಯಕ, ಭಾರತ ತಂಡದ ಪರವೂ ಆಡಿದ್ದ ವೇಣುಗೋಪಾಲ್ ರಾವ್ ಮಂಗಳವಾರ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಭಾರತ ಪರ ಅವರು 16 ಏಕದಿನ ಪಂದ್ಯಗಳನ್ನು ಆಡಿದ್ದರು. 1 ಅರ್ಧಶತಕದೊಂದಿಗೆ 218 ರನ್ ಗಳಿಸಿದ್ದರು. 37 ವರ್ಷದ ವೇಣುಗೋಪಾಲ್ ರಾವ್ ಇದೀಗ ನಿವೃತ್ತಿ ಘೋಷಿಸಿದ್ದಾರೆ.
ಇದನ್ನೂ ಓದಿ: ಲಸಿತ್ ಮಾಲಿಂಗ ವಿದಾಯ; ಭಾವುಕರಾದ ತೆಂಡುಲ್ಕರ್, ಬುಮ್ರಾ!
121 ಪ್ರಥಮ ದರ್ಜೆ, 137 ಲಿಸ್ಟ್ ‘ಎ’ ಪಂದ್ಯಗಳನ್ನು ಆಡಿದ್ದ ಅವರು 65 ಐಪಿಎಲ್ ಪಂದ್ಯಗಳನ್ನೂ ಆಡಿದ್ದರು. 2005ರಲ್ಲಿ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಅವರು, 2006ರಲ್ಲಿ ತಮ್ಮ ಕೊನೆ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ್ದರು. ಐಪಿಎಲ್‌ನಲ್ಲಿ ಡೆಕ್ಕನ್ ಚಾರ್ಜರ್ಸ್, ಡೆಲ್ಲಿ ಡೇರ್‌ಡೆವಿಲ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ಪರ ಆಡಿದ್ದರು.
ಇದನ್ನೂ ಓದಿ: ಟೆಸ್ಟ್ ಕ್ರಿಕೆಟ್‌ಗೆ ಪಾಕಿಸ್ತಾನ ವೇಗಿ ಮೊಹಮ್ಮದ್ ಅಮೀರ್ ವಿದಾಯ!
2006ರಲ್ಲಿ ಕೊನೆಯ ಬಾರಿಗೆ ಟೀಂ ಇಂಡಿಯಾ ಪರ ಆಡಿದ್ದ ವೇಣುಗೋಪಾಲ್ ರಾವ್ 2015ರ ವರೆಗೆ ದೇಸಿ ಕ್ರಿಕೆಟ್‌ನಲ್ಲಿ ಸಕ್ರಿಯವಾಗಿದ್ದರು. 4 ವರ್ಷ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡೋ ಉತ್ಸಾಹದಲ್ಲಿದ್ದರು. ಆದರೆ ಮತ್ತೆ ತಂಡಕ್ಕೆ ಸೇರಲು ಸಾಧ್ಯವಾಗಿಲ್ಲ. ಇದೀಗ ವಿದಾಯ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.