ಸಿಕ್ಸರ್ ಚಾಲೆಂಜ್- ಅಭ್ಯಾಸದ ವೇಳೆ ಟೀಂ ಇಂಡಿಯಾ ಕ್ರಿಕೆಟಿಗರ ಫನ್!

Published : Mar 07, 2019, 05:05 PM IST
ಸಿಕ್ಸರ್ ಚಾಲೆಂಜ್- ಅಭ್ಯಾಸದ ವೇಳೆ ಟೀಂ ಇಂಡಿಯಾ ಕ್ರಿಕೆಟಿಗರ ಫನ್!

ಸಾರಾಂಶ

ಧೋನಿ ತವರಿನಲ್ಲಿರುವ ಟೀಂ ಇಂಡಿಯಾ 3ನೇ ಏಕದಿನ ಪಂದ್ಯಕ್ಕೆ ತಯಾರಿ ನಡೆಸುತ್ತಿದೆ. ಆಸಿಸ್ ವಿರುದ್ದ ಸರಣಿ ಗೆಲುವಿನ ಹೊಸ್ತಿಲಲ್ಲಿರುವ ಟೀಂ ಇಂಡಿಯಾ ಪ್ರಾಕ್ಟೀಸ್ ವೇಳೆ ಸಿಕ್ಸರ್ ಚಾಲೆಂಜ್ ಮಾಡಿ ಗಮನಸೆಳೆದಿದೆ. ಇಲ್ಲಿದೆ ಕ್ರಿಕೆಟಿಗರ ಸಿಕ್ಸರ್ ಚಾಲೆಂಜ್.  

ರಾಂಚಿ(ಮಾ.07): ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ತಯಾರಿ ನಡೆಸುತ್ತಿದೆ. ರಾಂಚಿ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸುತ್ತಿರುವ ಭಾರತ ತೃತೀಯ ಪಂದ್ಯ ಗೆದ್ದು ಸರಣಿ ಕೈವಶ ಮಾಡಲು ತುದಿಗಾಲಲ್ಲಿ ನಿಂತಿದೆ. ಇದರ ನಡುವೆ ಸಿಕ್ಸರ್ ಚಾಲೆಂಜ್ ಆಡೋ ಮೂಲಕ ಗಮನಸೆಳೆದಿದೆ.

ಇದನ್ನೂ ಓದಿ: ಧೋನಿ ಮನೆಯಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಡಿನ್ನರ್!

ಮಾ.08 ರಂದು ತೃತೀಯ ಏಕದಿನ ಪಂದ್ಯ ನಡೆಯಲಿದೆ. ಎಂ.ಎಸ್.ಧೋನಿ ತವರಿನಲ್ಲಿ ಪ್ರಾಕ್ಟೀಸ್ ಮಾಡುತ್ತಿರುವ ಟೀಂ ಇಂಡಿಯಾ, ಸಿಕ್ಸರ್ ಚಾಲೆಂಜ್ ಹಮ್ಮಿಕೊಂಡಿತ್ತು. ಯಾರು ಲಾಂಗೆಸ್ಟ್ ಸಿಕ್ಸರ್ ಸಿಡಿಸುತ್ತಾರೆ ಅನ್ನೋ ಸ್ಪರ್ಧೆ ಏರ್ಪಡಿಸಲಾಗಿತ್ತು.  ನೆಟ್ಸ್‌ನಲ್ಲಿ ಕ್ರಿಕೆಟಿಗರು ಭರ್ಜರಿ ಸಿಕ್ಸರ್ ಸಿಡಿಸಿದ್ದಾರೆ.

 

 

ಇದನ್ನೂ ಓದಿ: ಧೋನಿ ಪೆವಿಲಿಯನ್ ಉದ್ಘಾಟಿಸಲು ನಿರಾಕರಿಸಿದ MSD!

ಎಂ.ಎಸ್.ಧೋನಿ, ರವೀಂದ್ರ ಜಡೇಜಾ ಸೇರಿದಂತೆ ಟೀಂ ಇಂಡಿಯಾ ಕ್ರಿಕೆಟಿಗರು ಚಾಲೆಂಜ್ ಸ್ವೀಕರಿಸಿ ಸಿಕ್ಸರ್ ಬಾರಿಸಿದರು.  ಕ್ರಿಕೆಟಿಗರ ಸಿಕ್ಸರ್ ಚಾಲೆಂಜ್ ಪ್ರಾಕ್ಟೀಸ್ ನೋಡಲು ಬಂದಿದ್ದ ಅಭಿಮಾನಿಗಳಿಗೆ ಸಖತ್ ಮನರಂಜನೆ ನೀಡಿತು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?
T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?