
ನವದೆಹಲಿ(ಮೇ.09): ಐಸಿಸಿ ಏಕದಿನ ವಿಶ್ವಕಪ್ ವೇಳೆ ಭಾರತ ತಂಡದ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಯ ಪತ್ನಿ, ಪ್ರೇಯಸಿ ಹಾಗೂ ಕುಟುಂಬ ಸದಸ್ಯರಿಗೆ ಕೇವಲ 15 ದಿನಗಳು ಮಾತ್ರ ಉಳಿಯಲು ಬಿಸಿಸಿಐ ಅನುಮತಿ ನೀಡಿದೆ. ಅಷ್ಟೇ ಅಲ್ಲ, ಟೂರ್ನಿ ಆರಂಭಗೊಂಡು 21 ದಿನಗಳ ಬಳಿಕವಷ್ಟೇ ಅವರು ತಮ್ಮ ಪತ್ನಿ ಇಲ್ಲವೇ ಕುಟುಂಬ ಸದಸ್ಯರನ್ನು ಭೇಟಿ ಮಾಡಬೇಕಿದೆ.
ಇದನ್ನೂ ಓದಿ: No Way.. ಇನ್ಮುಂದೆ ಬುಮ್ರಾ ನೋ ಬಾಲ್ ಹಾಕೋಕೆ ಚಾನ್ಸೇ ಇಲ್ಲ..!
ಮೇ 30ರಂದು ವಿಶ್ವಕಪ್ ಆರಂಭಗೊಳ್ಳಲಿದ್ದು, ಜೂನ್ 5ರಂದು ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಹೀಗಾಗಿ ಜೂ.16ರಂದು ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಆಟಗಾರರ ಕುಟುಂಬ ಸದಸ್ಯರು ಗೈರಾಗಲಿದ್ದಾರೆ. ಆಸ್ಪ್ರೇಲಿಯಾ ಪ್ರವಾಸದ ವೇಳೆ ಎದುರಾದ ಹೋಟೆಲ್ ಕೊಠಡಿ, ಪ್ರಯಾಣ, ಪಂದ್ಯದ ಪಾಸ್ ಸೇರಿದಂತೆ ಹಲವು ಸಮಸ್ಯೆಗಳನ್ನು ತಪ್ಪಿಸಲು ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ.
ಇದನ್ನೂ ಓದಿ: ವಿಶ್ವಕಪ್ ಮೀಸಲು ಆಟಗಾರನಾಗಿ ಅನುಭವಿ ಟೀಂ ಇಂಡಿಯಾ ಕ್ರಿಕೆಟಿಗನಿಗೆ ಸ್ಥಾನ
ಜೂ.22ರ ಆಷ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೂ ಮೊದಲು ಕುಟುಂಬ ಸದಸ್ಯರಿಗೆ ತಂಡದೊಂದಿಗೆ ಉಳಿದುಕೊಳ್ಳಲು ಅವಕಾಶ ನೀಡಲಾಗುತ್ತದೆ ಎನ್ನಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.