
ಗೋಕರ್ಣ(ಏ.28): ಭಾರತದ ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ಸದ್ಯ ಐಪಿಎಲ್ ಟೂರ್ನಿಲ್ಲಿ ಬ್ಯುಸಿಯಾಗಿದ್ದರೆ, ಇತ್ತ ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಕೋಚ್ ಅನಿಲ್ ಕುಂಬ್ಳೆ ಗೋಕರ್ಣ ಶ್ರೀ ಮಹಾಬಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಿದ ಅನಿಲ್ ಕುಂಬ್ಳೆ ದಂಪತಿ , ಪ್ರಸಿದ್ಧ ಶಿವನ ಆತ್ಮಲಿಂಗಕ್ಕೆ ಪೂಜೆ ಹಾಗೂ ಅಭಿಷೇಕ ನೆರವೇರಿಸಿದರು.
ಇದನ್ನೂ ಓದಿ: ವಿಶ್ವಕಪ್ 2019: ಟೀಂ ಇಂಡಿಯಾ ಪ್ರಕಟಿಸಿದ ಅನಿಲ್ ಕುಂಬ್ಳೆ!
ಕುಂಬ್ಳೆ ದಂಪತಿ, ಶಿವನ ದೇವಾಲಯದಲ್ಲಿ ವಿಶೇಷ, ಪೂಜೆ ನೆರವೇರಿಸಿದರು. ನವಧಾನ್ಯ, ಗಂಗಾಭಿಷೇಕ ಪೂಜೆ ಹಾಗೂ ಆತ್ಮಲಿಂಗಕ್ಕೆ ಪಂಜಾಮೃತ ಪೂಜೆ ಸಲ್ಲಿಸಿದರು. ಈ ವೇಳೆ ಗೋಕರ್ಣ ಶ್ರೀ ಮಹಾಬಲೇಶ್ವರ ದೇವಸ್ಥಾನದ ಅರ್ಚಕರು ಸ್ಮರಣಿಕೆ ನೀಡಿ ಗೌರವಿಸಿದರು.
ಇದನ್ನೂ ಓದಿ: ಅನಿಲ್ ಕುಂಬ್ಳೆ ರಾಜೀನಾಮೆ ಸೀಕ್ರೆಟ್ಸ್ ಬಿಚ್ಚಿಟ್ಟ ಲಕ್ಷ್ಮಣ್..!
ಆಡಳಿತ ಮಂಡಳಿ ಸದಸ್ಯರು ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗನ ಜೊತೆ ಫೋಟೋ ತೆಗಿಸಿಕೊಂಡು ಸಂಭ್ರಮಿಸಿದರು. ಟೆಸ್ಟ್ ಕ್ರಿಕೆಟ್‌ನಲ್ಲಿ 619 ವಿಕೆಟ್ ಕಬಳಿಸಿರುವ ಕುಂಬ್ಳೆ, ಗರಿಷ್ಠ ವಿಕೆಟ್ ಕಬಳಿಸಿದ ಪಟ್ಟಿಯಲ್ಲಿ 3ನೇ ಸ್ಥಾನ ಪಡೆದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.