ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಆದರೆ ಏಕದಿನ ಕ್ರಿಕೆಟ್‌ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
ಬೆಂಗಳೂರು[ಸೆ.03]: ಟೀಂ ಇಂಡಿಯಾ ಅನುಭವಿ ಕ್ರಿಕೆಟ್ ಆಟಗಾರ್ತಿ ಮಿಥಾಲಿ ರಾಜ್ ಮಂಗಳವಾರ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್’ಗೆ ವಿದಾಯ ಘೋಷಿಸಿದ್ದಾರೆ. ಮುಂಬರುವ 2021ರ ಏಕದಿನ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರಕ್ಕೆ ಬಂದಿರುವುದಾಗಿ ಮಿಥಾಲಿ ರಾಜ್ ತಿಳಿಸಿದ್ದಾರೆ.
ಪಿವಿ ಸಿಂಧೂ ಪಾತ್ರದಲ್ಲಿ ದೀಪಿಕಾ, ಮಿಥಾಲಿಯಾಗಿ ತಾಪ್ಸಿ ಪನ್ನು
undefined
36 ವರ್ಷದ ಮಿಥಾಲಿ ಭಾರತ ಪರ ಮೂರು ಟಿ20 ವಿಶ್ವಕಪ್ ಸೇರಿದಂತೆ ಒಟ್ಟು 89 ಟಿ20 ಪಂದ್ಯಗಳನ್ನಾಡಿದ್ದು, 17 ಅರ್ಧಶತಕ ಸೇರಿದಂತೆ 2,364 ರನ್ ಬಾರಿಸಿದ್ದಾರೆ. 2006ರಲ್ಲಿ ಟಿ20 ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ ಮಿಥಾಲಿ, 32 ಪಂದ್ಯಗಳಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಮುನ್ನಡೆಸಿದ್ದರು. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್’ನಲ್ಲಿ 2,000 ಪೂರೈಸಿದ ಮೊದಲ ಭಾರತೀಯ ಕ್ರಿಕೆಟ್ ಆಟಗಾರ್ತಿ ಎನ್ನುವ ದಾಖಲೆ ಬರೆದಿರುವ ಮಿಥಾಲಿ, ಇದೇ ವರ್ಷದ ಮಾರ್ಚ್’ನಲ್ಲಿ ಗುವಾಹಟಿಯಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ಟಿ20 ಪಂದ್ಯವನ್ನಾಡಿದ್ದರು.
ವಿದಾಯದಿಂದ ಹೊರಬಂದ ರಾಯುಡು; ಭಾರತದ ಶಾಹಿದಿ ಆಫ್ರಿದಿ ಎಂದ ಫ್ಯಾನ್ಸ್!
ದೇಶಕ್ಕಾಗಿ ವಿಶ್ವಕಪ್ ಗೆಲ್ಲುವ ಕನಸಿದೆ. ಇದಕ್ಕಾಗಿ ನಾನು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. 2021ರ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಟಿ20 ಕ್ರಿಕೆಟ್’ಗೆ ನಿವೃತ್ತಿ ತೆಗೆದುಕೊಳ್ಳುತ್ತಿದ್ದೇನೆ ಎಂದು ಮಿಥಾಲಿ ರಾಜ್ ತಿಳಿಸಿದ್ದಾರೆ.
ಐಸಿಸಿ ಏಕದಿನ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಮಿಥಾಲಿ ರಾಜ್ ನೇತೃತ್ವದ ಭಾರತ ಕ್ರಿಕೆಟ್ ಫೈನಲ್ ಪ್ರವೇಶಿಸಿತ್ತು. ಆದರೆ ಇಂಗ್ಲೆಂಡ್ ವಿರುದ್ಧ ರೋಚಕ ಸೋಲು ಕಾಣುವ ಮೂಲಕ ಚೊಚ್ಚಲ ವಿಶ್ವಕಪ್ ಗೆಲ್ಲುವ ಅವಕಾಶವನ್ನು ಕೈಚೆಲ್ಲಿಕೊಂಡಿತ್ತು.