ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಗೆದ್ದಿರುವ ಕೊಹ್ಲಿ ಸೈನ್ಯ, ಟೆಸ್ಟ್ ಪಂದ್ಯಕ್ಕೆ ತಯಾರಿ ಆರಂಭಿಸಿದೆ. ಆದರೆ ಏಕದಿನ ಸರಣಿಯಲ್ಲಿ ಇಂಜುರಿಗೆ ತುತ್ತಾಗಿರುವ ನಾಯಕ ವಿರಾಟ್ ಕೊಹ್ಲಿ ಬದಲು ಅಜಿಂಕ್ಯ ರಹಾನೆಗೆ ನಾಯಕ ಪಟ್ಟ ನೀಡುವ ಸಾಧ್ಯತೆ ಇದೆ.
ಪೋರ್ಟ್ ಆಫ್ ಸ್ಪೇನ್(ಆ.17): ವೆಸ್ಟ್ ಇಂಡೀಸ್ ವಿರುದ್ದದ ಟಿ20 ಹಾಗೂ ಏಕದಿನ ಸರಣಿ ಗೆದ್ದಿರುವ ಟೀಂ ಇಂಡಿಯಾ ಇದೀಗ ಟೆಸ್ಟ್ ಸರಣಿಗೆ ತಯಾರಿ ಆರಂಭಿಸಿದೆ. ಆದರೆ ವೆಸ್ಟ್ ಇಂಡೀಸ್ ವಿರುದ್ದ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಗಾಯಗೊಂಡಿರುವ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡುವು ಸಾಧ್ಯತೆ ಹೆಚ್ಚಾಗಿದೆ.
ಇದನ್ನೂ ಓದಿ: ಒಂದು ದಶಕದಲ್ಲಿ ಕೊಹ್ಲಿ 20 ಸಾವಿರ ರನ್; ದಿಗ್ಗಜರ ದಾಖಲೆ ಪುಡಿ ಪುಡಿ!
ಆಗಸ್ಟ್ 22 ರಿಂದ ವೆಸ್ಟ್ ಇಂಡೀಸ್ ವಿರುದ್ದದ 2 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಇದಕ್ಕೂ ಮುನ್ನ 3 ದಿನಗಳ ಅಭ್ಯಾಸ ಪಂದ್ಯ ನಡೆಯಲಿದೆ. ಇಂದಿನಿಂದ(ಆ.17) ಆರಂಭವಾಗಲಿರುವ ಅಭ್ಯಾಸ ಪಂದ್ಯಕ್ಕೆ ಗಾಯಗೊಂಡಿರುವ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಹೆಚ್ಚಿದೆ. ಹೀಗಾದಲ್ಲಿ ಉಪನಾಯಕ ಅಜಿಂಕ್ಯ ರಹಾನೆ, ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ.
ಇದನ್ನೂ ಓದಿ: INDvWI 2ನೇ ಏಕದಿನ: ಸೆಂಚುರಿ ಸಿಡಿಸಿ ಪಾಂಟಿಂಗ್ ದಾಖಲೆ ಮುರಿದ ಕೊಹ್ಲಿ!
ವೆಸ್ಟ್ ಇಂಡೀಸ್ ವಿರುದ್ದದ 3ನೇ ಪಂದ್ಯದಲ್ಲಿ ಕೊಹ್ಲಿ ಕೈಬೆರಳಿನ ಗಾಯಕ್ಕೆ ತುತ್ತಾಗಿದ್ದರು. ಈ ಪಂದ್ಯದಲ್ಲಿ ಕೊಹ್ಲಿ ಸೆಂಚುರಿ ಸಿಡಿಸೋ ಮೂಲಕ ಭಾರತದ ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಕೊಹ್ಲಿ ಇಂಜುರಿಯಿಂದ ಸಂಪೂರ್ಣ ಚೇತರಿಸಿಕೊಂಡಿಲ್ಲ. ಹೀಗಾಗಿ ಅಭ್ಯಾಸ ಪಂದ್ಯಕ್ಕೆ ಗೈರಾಗುವ ಸಾಧ್ಯತೆ ಹೆಚ್ಚಿದೆ.