
ನವದೆಹಲಿ(ಸೆ.09): ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಮುರಳಿ ವಿಜಯ್, ಇಂಗ್ಲಿಷ್ ಕೌಂಟಿ ಚಾಂಪಿಯನ್ ಶಿಪ್‌ನ ಫೈನಲ್ ಹಂತದ 3 ಪಂದ್ಯಗಳಲ್ಲಿ ಎಸ್ಸೆಕ್ಸ್ ತಂಡದ ಪರ ಆಡಲಿದ್ದಾರೆ ಎಂದು ಬಿಸಿಸಿಐ ಶನಿವಾರ ತಿಳಿಸಿದೆ.
ಇಂಗ್ಲೆಂಡ್ ವಿರುದ್ಧ ಮೊದಲೆರಡು ಟೆಸ್ಟ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ಕಾರಣ ಇನ್ನುಳಿದ ಪಂದ್ಯಗಳಿಂದ ಮುರುಳಿ ವಿಜಯ್ ಅವರನ್ನು ತಂಡದಿಂದ ಕೈಬಿಡಲಾಗಿತ್ತು. ಮರುಳಿ ವಿಜಯ್ ಬದಲು ಪೃಥ್ವಿ ಶಾಗೆ ಅವಕಾಶ ನೀಡಲಾಗಿದೆ.
ಟೀಂ ಇಂಡಿಯಾದಿಂದ ಹೊರಬಿದ್ದಿರುವ ಮುರಳಿ, ಟ್ರೆಂಟ್‌ಬ್ರಿಡ್ಜ್ ನಲ್ಲಿ ಸೆ.10 ರಿಂದ ನಾಟಿಂಗ್‌ಹ್ಯಾಮ್ ವಿರುದ್ಧ, ಸೆ.18ರಿಂದ ವರ್ಸೆಸ್ಟರ್‌ಶೈರ್ ವಿರುದ್ಧ 2ನೇ ಹಾಗೂ ಸೆ.24 ರಿಂದ ಸರ್ರೆ ವಿರುದ್ಧ 3ನೇ ಪಂದ್ಯವನ್ನಾಡಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.