
ಆಡಿಲೇಡ್(ಡಿ.10): ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿದ ಭಾರತ ಇದೀಗ ದ್ವಿತೀಯ ಟೆಸ್ಟ್ ಪಂದ್ಯದತ್ತ ಚಿತ್ತ ನೆಟ್ಟಿದೆ. ಆದರೆ 2ನೇ ಪಂದ್ಯಕ್ಕೂ ಮೊದಲು ಟೀಂ ಇಂಡಿಯಾ ಕ್ರಿಕೆಟಿಗರಿಗೆ ವಿಶ್ರಾಂತಿ ಬೇಕಿದೆ ಎಂದು ಕೋಚ್ ರವಿ ಶಾಸ್ತ್ರಿ ಹೇಳಿದ್ದಾರೆ.
ಇದನ್ನೂ ಓದಿ: ಅಡಿಲೇಡ್ ಟೆಸ್ಟ್ ನಿರ್ಮಾಣವಾದ ದಾಖಲೆಗಳೆಷ್ಟು..?
ನೆಟ್ ಪ್ರಾಕ್ಟೀಸ್ ಮಾಡುವುದಕ್ಕಿಂತ ಕ್ರಿಕೆಟಿಗರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ಶಾಸ್ತ್ರಿ ಹೇಳಿದ್ದಾರೆ. ಆಟಗಾರರು ಬಂದು ಹಾಜರಾತಿ ನೀಡಿದರೆ ಸಾಕು, ಅಭ್ಯಾಸ ಮಾಡಬೇಕಿಲ್ಲ ಎಂದು ಶಾಸ್ತ್ರಿ ಹೇಳಿದ್ದಾರೆ. ಇದೀಗ ಶಾಸ್ತ್ರಿ ಹೇಳಿಕೆ ವಿವಾದಕ್ಕೆ ಕಾರಣವಾಗೋ ಸಾಧ್ಯತೆ ಹೆಚ್ಚಿದೆ.
ಇದನ್ನೂ ಓದಿ: ರಾಹುಲ್ ಕ್ಯಾಚ್ ಪ್ರಶ್ನಿಸಿದ ಫಾಕ್ಸ್ ಸ್ಪೋರ್ಟ್ ವಿರುದ್ಧ ಟ್ವಿಟರಿಗರು ಗರಂ!
ಪರ್ತ್ ಪಿಚ್ ವೇಗಿಗಳಿಗೆ ನೆರವು ನೀಡಲಿದೆ. ನಮ್ಮ ವೇಗಿಗಳು 2ನೇ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡೋ ವಿಶ್ವಾಸವಿದೆ ಎಂದಿದ್ದಾರೆ. ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 31 ರನ್’ಗಳಿಂದ ಮಣಿಸುವ ಮೂಲಕ ಟೀಂ ಇಂಡಿಯಾ ಶುಭಾರಂಭ ಮಾಡಿದೆ. ಈ ಮೂಲಕ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಕಾಯ್ದುಕೊಂಡಿದೆ. ಎರಡನೇ ಟೆಸ್ಟ್ ಪಂದ್ಯ ಡಿಸೆಂಬರ್ 14ರಂದು ಪರ್ತ್’ನಲ್ಲಿ ಆರಂಭವಾಗಲಿದೆ.
ಇದನ್ನೂ ಓದಿ: ಮತ್ತೆ ಸ್ಲೆಡ್ಜಿಂಗ್ ಮಾಡಿದ ಪಂತ್; ಟ್ವಿಟರ್’ನಲ್ಲಿ ವಿಡಿಯೋ ವೈರಲ್..!
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.