
ಪೋರ್ಟ್ ಆಫ್ ಸ್ಪೇನ್(ಆ.15): ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಸ್ವಾತಂತ್ರ್ಯ ದಿನಾಚರಣಗೆ ಭರ್ಜರಿ ಉಡುಗೊರೆ ನೀಡಿದೆ. ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಗೆಲುವು ಸಾಧಿಸೋ ಮೂಲಕ ಸರಣಿ ಗೆದ್ದುಕೊಂಡಿದೆ. 73ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ ಇದೀಗ ಸಮಸ್ತ ಭಾರತೀಯರಿಗೆ ಶುಭಕೋರಿದ್ದಾರೆ.
ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆ; ಅತ್ಯಂತ ಅಪಾಯಕಾರಿ ಸಿಯಾಚಿನ್‌ಗೆ ಧೋನಿ ಭೇಟಿ!
ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಯಜುವೇಂದ್ರ ಚಹಾಲ್, ಕೋಚ್ ರವಿ ಶಾಸ್ತ್ರಿ ಸೇರಿದಂತೆ ಟೀಂ ಇಂಡಿಯಾ ಕ್ರಿಕೆಟಿಗರು ಸ್ವಾತಂತ್ರ್ಯ ದಿನಾಚರಣೆಗೆ ಶುಭಕೋರಿದ್ದಾರೆ. ಕ್ರಿಕೆಟಿಗ ವಿಡಿಯೋ ಶುಭ ಹಾರೈಕೆಯನ್ನು ಬಿಸಿಸಿಐ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.
ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆ; ಲಡಾಕ್‌ಗೆ ಧೋನಿ ಭೇಟಿ; ಕೇಂದ್ರಾಡಳಿತದಲ್ಲಿ ಹೊಸ ಸಂಚಲನ!
ಟಿ20 ಸರಣಿ ಬಳಿಕ ಏಕದಿನ ಸರಣಿ ಗೆದ್ದ ಟೀಂ ಇಂಡಿಯಾ ಇದೀಗ 2 ಪಂದ್ಯದ ಟೆಸ್ಟ್ ಸರಣಿಗೆ ಸಜ್ಜಾಗಲಿದೆ. ಆಗಸ್ಟ್ 17 ರಿಂದ 19ರ ವರೆಗೆ 3 ದಿನದ ಅಭ್ಯಾಸ ಪಂದ್ಯ ಆಡಲಿರುವ ಟೀಂ ಇಂಡಿಯಾ, ಆಗಸ್ಟ್ 22 ರಿಂದ ಟೆಸ್ಟ್ ಸರಣಿ ಆರಂಭಿಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.