
ಮುಂಬೈ(ಆ.29): ಶ್ರೀಲಂಕಾ ವಿರುದ್ಧದ ನಡೆದ 4 ದಿನಗಳ ಟೆಸ್ಟ್ ಪಂದ್ಯದಲ್ಲಿ ಮೊದಲ ಅಂತಾರಾಷ್ಟ್ರೀಯ ವಿಕೆಟ್ ಪಡೆದು ಗಮನಸೆಳೆದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರನಿಗೆ ಇದೀಗ ತಂಡದಿಂದ ಕೊಕ್ ನೀಡಲಾಗಿದೆ.
ಸೆಪ್ಟೆಂಬರ್ 29 ರಿಂದ ಬಾಂಗ್ಲಾದೇಶದಲ್ಲಿ ನಡೆಯಲಿರುವ ಅಂಡರ್ 19 ಏಷ್ಯಾ ಕಪ್ ಟೂರ್ನಿಗೆ ಟೀಂ ಇಂಡಿಯಾ ಆಯ್ಕೆ ಮಾಡಲಾಗಿದೆ. ಲಂಕಾ ವಿರುದ್ಧದ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದ್ದ ಅರ್ಜುನ್ ತೆಂಡೂಲ್ಕರ್‌ನ್ನ ಏಷ್ಯಾಕಪ್ ಟೂರ್ನಿಯಿಂದ ಕೈಬಿಡಲಾಗಿದೆ.
ಯೂಥ್ ಕಪ್ ಟೂರ್ನಿಯಲ್ಲಿ ಅರ್ಜುನ್ ತೆಂಡೂಲ್ಕರ್ 1 ವಿಕೆಟ್ ಹಾಗೂ 14 ರನ್ ಸಿಡಿಸಿದ್ದರು. ಮೊದಲ ಅಂತಾರಾಷ್ಟ್ರೀಯ ಟೂರ್ನಿಯಲ್ಲಿ ಅರ್ಜುನ್ ಕಳಪೆ ಫಾರ್ಮ್ ಸಮಸ್ಯೆ ಎದುರಿಸಿದ್ದಾರೆ. ಹೀಗಾಗಿ ಅಂಡರ್ 19 ಏಷ್ಯಾಕಪ್ ತಂಡಕ್ಕೆ ಆಯ್ಕೆಯಾಗಿಲ್ಲ. ಮಹಾರಾಷ್ಟ್ರ ಬ್ಯಾಟ್ಸ್‌ಮನ್ ಪವನ್ ಶಾ ಅಂಡರ್ 19 ತಂಡವನ್ನ ಮುನ್ನಡೆಸಲಿದ್ದಾರೆ.
ಇದನ್ನೂ ಓದಿ:ಮನೀಶ್ ಪಾಂಡೆ-ಮಯಾಂಕ್ ಅಬ್ಬರದಿಂದ ಭಾರತಕ್ಕೆ ಭರ್ಜರಿ ಗೆಲುವು
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.