ವಿಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಆಯ್ಕೆ ಇಂದು

Published : Jul 21, 2019, 12:03 PM IST
ವಿಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಆಯ್ಕೆ ಇಂದು

ಸಾರಾಂಶ

ಆಗಸ್ಟ್ 3 ರಿಂದ ಸೆಪ್ಟೆಂಬರ್ 3 ರವರೆಗೆ ಭಾರತ ಕ್ರಿಕೆಟ್ ತಂಡ ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ನಡೆಯಲಿದ್ದು, ಇಂದು ಆಯ್ಕೆ ಸಮಿತಿ ಟೀಂ ಇಂಡಿಯಾ ಆಯ್ಕೆ ಮಾಡಲಿದೆ.

ಮುಂಬೈ[ಜು.21]: ಭಾರತ ತಂಡದ ಆಯ್ಕೆ ಇಂದು ವೆಸ್ಟ್ ಇಂಡೀಸ್ ಪ್ರವಾಸಕ್ಕೆ ತೆರಳಲಿರುವ ಭಾರತ ತಂಡದ ಆಯ್ಕೆ ಪ್ರಕ್ರಿಯೆ ಸಭೆ ಭಾನುವಾರ ಮುಂಬೈನ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿದೆ. ಆಯ್ಕೆ ಸಮಿತಿ ಅಧ್ಯಕ್ಷ ಎಂ.ಎಸ್.ಕೆ. ಪ್ರಸಾದ್ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ಖಚಿತಪಡಿಸಿವೆ. 

ವಿಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಆಯ್ಕೆ: 3 ಮಾದರಿಗೂ ಕೊಹ್ಲಿಯೇ ನಾಯಕ

ಆಗಸ್ಟ್ 3 ರಿಂದ ಸೆಪ್ಟೆಂಬರ್ 3 ರವರೆಗೆ ಭಾರತ ಕ್ರಿಕೆಟ್ ತಂಡ ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ನಡೆಯಲಿದೆ. 1 ತಿಂಗಳು ನಡೆಯುವ ಸರಣಿಯಲ್ಲಿ ಟೀಂ ಇಂಡಿಯಾ 3 ಟಿ20, 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳನ್ನಾಡಲಿದೆ. ವಿರಾಟ್ ಕೊಹ್ಲಿ ವಿಂಡೀಸ್ ಪ್ರವಾಸಕ್ಕೆ ಲಭ್ಯರಿದ್ದು, ಮೂರು ಮಾದರಿಯಲ್ಲೂ ನಾಯಕರಾಗಿ ಮುಂದುವರೆಯಲಿದ್ದಾರೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ.

ಧೋನಿಗೆ ವಿಶ್ರಾಂತಿ ನೀಡಿರುವುದರಿಂದ ರಿಷಭ್ ಪಂತ್ ಏಕದಿನ ತಂಡದಲ್ಲಿ ತಂಡದಲ್ಲಿ ಉಳಿಸಿಕೊಳ್ಳಲಿದ್ದಾರೆ. ಇನ್ನು ಕನ್ನಡಿಗರಾದ ಮಯಾಂಕ್ ಅಗರ್’ವಾಲ್, ಮನೀಶ್ ಪಾಂಡೆ, ಶ್ರೇಯಸ್ ಅಯ್ಯರ್, ಶುಭ್’ಮನ್ ಗಿಲ್ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

John Cena ಕೊನೆಯ ಮ್ಯಾಚ್ ಯಾವಾಗ? ಎದುರಾಳಿ ಯಾರು? ಲೈವ್ ಸ್ಟ್ರೀಮಿಂಗ್ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್
ವಿಜಯ್‌ ಹಜಾರೆ ಟ್ರೋಫಿ: ಒಂದೂವರೆ ದಶಕದ ಬಳಿಕ ಡೆಲ್ಲಿ ಪರ ವಿರಾಟ್ ಕೊಹ್ಲಿ ಮೈದಾನಕ್ಕೆ! ಬೆಂಗಳೂರಲ್ಲಿ ನಡೆಯುತ್ತೆ ಮ್ಯಾಚ್‌