ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ನಾಗ್ಪುರ ಪಂದ್ಯ ಕುತೂಹಲ ಘಟ್ಟ ತಲುಪಿದೆ. ಮೊದಲು ಬ್ಯಾಟಿಂಗ್ ಮಾಡಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶತಕದ ನೆರವಿಂದ ಸ್ಪರ್ಧಾತ್ಮಕ ಮೊತ್ತ ದಾಖಲಿಸಿದೆ. ಇಲ್ಲಿದೆ ಟೀಂ ಇಂಡಿಯಾ ಬ್ಯಾಟಿಂಗ್ ಅಪ್‌ಡೇಟ್ಸ್
ನಾಗ್ಪುರ(ಮಾ.05): ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕದ ನೆರವಿನಿಂದ ಟೀಂ ಇಂಡಿಯಾ ನಾಗ್ಪುರದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ದದ 2ನೇ ಏಕದಿನ ಪಂದ್ಯದಲ್ಲಿ 250 ರನ್ ಸಿಡಿಸಿ ಆಲೌಟ್ ಆಗಿದೆ. ಈ ಮೂಲಕ ಆಸಿಸ್ ಗೆಲುವಿಗೆ 251 ರನ್ ಟಾರ್ಗೆಟ್ ನೀಡಿದೆ.
ಇದನ್ನೂ ಓದಿ: 40ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ..!
undefined
ಟಾಸ್ ಸೋತು ಬ್ಯಾಟಿಂಗ್ ಇಳಿದ ಟೀಂ ಇಂಡಿಯಾ ಮೊದಲ ಓವರ್‌ನಲ್ಲೇ ವಿಕೆಟ್ ಕಳೆದುಕೊಂಡಿತು. ರೋಹಿತ್ ಶರ್ಮಾ ಶೂನ್ಯ ಸುತ್ತಿದರು. ಇನ್ನು ಶಿಖರ್ ಧವನ್ 21 ರನ್ ಸಿಡಿಸಿ ಔಟಾದರು. ಬಳಿಕ ನಾಯಕ ವಿರಾಟ್ ಕೊಹ್ಲಿ ಹಾಗೂ ವಿಜಯ್ ಶಂಕರ್ ಜೊತೆಯಾಟದಿಂದ ಭಾರತ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿತು. ಆದರೆ ವಿಜಯ್ ಶಂಕರ್ 46 ರನ್ ಸಿಡಿಸಿ ರನೌಟ್‌ಗೆ ಬಲಿಯಾದರು.
ಇದನ್ನೂ ಓದಿ: ಐತಿಹಾಸಿಕ ದಾಖಲೆಯ ಹೊಸ್ತಿಲಲ್ಲಿ ಟೀಂ ಇಂಡಿಯಾ..!
ವಿಜಯ್ ಶಂಕರ್ ವಿಕೆಟ್ ಉರುಳುತ್ತಿದ್ದಂತೆ ಭಾರತ ದಿಢೀರ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಕೇದಾರ್ ಜಾಧವ್ 11 ರನ್ ಸಿಡಿಸಿ ಔಟಾದರೆ, ಎಂ.ಎಸ್.ಧೋನಿ ಶೂನ್ಯ ಸುತ್ತಿ ನಿರಾಸೆ ಮೂಡಿಸಿದರು. ಆದರೆ ವಿರಾಟ್ ಕೊಹ್ಲಿ ಹೋರಾಟ ಮುಂದುವರಿಸಿದರು.
ಇದನ್ನೂ ಓದಿ: ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸೌತ್ ಆಫ್ರಿಕಾ ಸ್ಟಾರ್ ಕ್ರಿಕೆಟಿಗ!
ಆಸಿಸ್ ಬೌಲರ್‌ಗಳಿಗೆ ದಿಟ್ಟ ಉತ್ತರ ನೀಡಿದ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 40ನೇ ಶತಕ ದಾಖಲಿಸಿದರು. ಕೊಹ್ಲಿ 120 ಎಸೆತದಲ್ಲಿ 10 ಬೌಂಡರಿ ಮೂಲಕ 116 ರನ್ ಸಿಡಿಸಿ ಔಟಾದರು. ರವೀಂದ್ರ ಜಡೇಜಾ 21 ರನ್ ಕಾಣಿಕೆ ನೀಡಿದರು. ಕುಲ್ದೀಪ್ ಯಾದವ್ 3, ಜಸ್ಪ್ರೀತ್ ಬುಮ್ರಾ ಶೂನ್ಯ ಸುತ್ತೋ ಮೂಲಕ ಭಾರತ 49.2 ಓವರ್‌ಗಳಲ್ಲಿ 250 ರನ್ ಸಿಡಿಸಿ ಆಲೌಟ್ ಆಯಿತು. ಆಸಿಸ್ ಪರ ಪ್ಯಾಟ್ ಕಮಿನ್ಸ್ 4 ವಿಕೆಟ್ ಕಬಳಿಸಿ ಮಿಂಚಿದರು.