
ಹೈದರಾಬಾದ್[ಡಿ.04] 2011ರ ವಿಶ್ವಕಪ್ ಹಾಗೂ 2007ರ ಟಿ-20 ವಿಶ್ವಕಪ್ ಫೈನಲ್ ಪಂದ್ಯದ ನಿಜವಾದ ಆಟಗಾರ ಎರಡು ಬಾರಿಯ ಐಪಿಎಲ್ ವಿನ್ನರ್ ಗೌತಮ್ ಗಂಭೀರ್ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳುವ ತೀರ್ಮಾನಕ್ಕೆ ಬಂದಿದ್ದಾರೆ.
ಆಂಧ್ರ ಪ್ರದೇಶ ಹಾಗೂ ದೆಹಲಿ ನಡುವೆ ಡಿಸೆಂಬರ್ 6ರಿಂದ ದೆಹಲಿಯ ಫಿರೋಜ್ ಶಾ ಕೋಟ್ಲಾದಲ್ಲಿ ನಡೆಯಲಿರುವ ರಣಜಿ ಟ್ರೋಫಿ ಪಂದ್ಯವೇ ಅಂತಿಮ ಪಂದ್ಯ ಎಂಬ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ.
ತಮ್ಮ ಫೇಸ್ಬುಕ್ ಖಾತೆಯಲ್ಲಿ ಹನ್ನೊಂದು ನಿಮಿಷದ ವಿಡಿಯೋವನ್ನು ಪೋಸ್ಟ್ ಮಾಡಿ ಗಂಭೀರ್ ತಮ್ಮ 14 ವರ್ಷದ ಕ್ರಿಕೆಟ್ ಬ್ಯಾಟ್ ಕೆಳಗಿಟ್ಟಿದ್ದಾರೆ. ಎಡಗೈ ದಾಂಡಿಗ ಆರಂಭಿಕರಾಗಿ ವೀರೇಂದ್ರ ಸೆಹ್ವಾಗ್ ಅವರೊಂದಿಗೆ ಅನೇಕ ಇನಿಂಗ್ಸ್ ಕಟ್ಟಿದ್ದರು.
ಅಡಿಲೇಡ್ ಟೆಸ್ಟ್ ಗೆಲ್ಲಲು ಆಸಿಸ್ ಮಾಸ್ಟರ್ ಪ್ಲಾನ್..!
ಗಂಭೀರ್ 58 ಟೆಸ್ಟ್, 147 ಏಕದಿನ ಹಾಗೂ 37 ಟಿ-20 ಪಂದ್ಯದಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಒಟ್ಟಾರೆ 10,324 ರನ್ ಬಾರಿಸಿ ಹಲವಾರು ಪಂದ್ಯಗಳಲ್ಲಿ ತಂಡಕ್ಕೆ ಜಯ ತಂದಿತ್ತಿದ್ದಾರೆ. ಗಂಭೀರ್ ನಾಯಕತ್ವದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ 2012 ಹಾಗೂ 2014ರಲ್ಲಿ ಐಪಿಎಲ್ ಪ್ರಶಸ್ತಿಗೆ ಮುತ್ತಿಕ್ಕಿತ್ತು.
ಕಳೆದ ಎರಡು ವರ್ಷದಿಂದ ಹಿರಿಯ ಆಟಗಾರ ಕಡೆಗಣನೆಗೆ ಒಳಗಾಗಿದ್ದರು. ತಂಡಕ್ಕೆ ಮರಳಲು ಸಾಧ್ಯವಾಗದೆ ಇದ್ದದ್ದು ಗೌತಿ ವಿದಾಯಕ್ಕೆ ಕಾರಣವಾಯಿತು ಎನ್ನಬಹುದು.
2007ರ ಟಿ-20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಪಾಕ್‌ವಿರುದ್ಧ 75 ರನ್ ಬಾರಿಸಿ ಮಹೇಂದ್ರ ಸಿಂಗ್ ಧೋನಿ ಟ್ರೋಫಿ ಎತ್ತಿ ಹಿಡಿಯಲು ಕಾರಣವಾಗಿದ್ದರು. ಶ್ರೀಲಂಕಾ ವಿರುದ್ಧ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ 97 ರನ್ ಸಿಡಿಸಿ ಧೋನಿ ಅವರೊಂದಿಗೆ ಭಾಗಿಯಾಗಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.