
ನವದೆಹಲಿ(ಸೆ.10): ದೆಹಲಿ ಹಾಗೂ ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ಗುರುವಾರ ಇಲ್ಲಿನ ಫಿರೋಜ್ ಶಾ ಕೋಟ್ಲಾ ಮೈದಾನದ ಸ್ಯಾಂಡ್‌ವೊಂದಕ್ಕೆ ವಿರಾಟ್ ಕೊಹ್ಲಿ ಹೆಸರನ್ನು ನಾಮಕರಣ ಮಾಡಲಿದೆ. ಕಾರ್ಯಕ್ರಮದಲ್ಲಿ ಭಾರತ ತಂಡದ ಆಟಗಾರರು ಪಾಲ್ಗೊಳ್ಳಲಿದ್ದಾರೆ ಎಂದು ಡಿಡಿಸಿಎ ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ: 2025ರಲ್ಲಿ ಕೊಹ್ಲಿ ಪಾಕ್ ತಂಡದ ಆರಂಭಿಕ; ನೆಟ್ಟಿಗರ ಅತಿರೇಕಕ್ಕೆ ಆಕ್ರೋಶ!
ಸೆ.15ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಆರಂಭಗೊಳ್ಳಲಿರುವ ಟಿ20 ಸರಣಿಯಲ್ಲಿ ಆಡಲು ಆಟಗಾರರು ತಂಡ ಕೂಡಿಕೊಳ್ಳಲಿದ್ದು, ಮೊದಲ ಪಂದ್ಯಕ್ಕಾಗಿ ಧರ್ಮಶಾಲಾಗೆ ಪ್ರಯಾಣ ಮಾಡುವ ಮೊದಲು ‘ಕೊಹ್ಲಿ ಸ್ಟ್ಯಾಂಡ್’ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಇದನ್ನೂ ಓದಿ: ಫಿರೋಜ್ ಶಾ ಕೋಟ್ಲಾ ಮೈದಾನ ಇನ್ಮುಂದೆ ಅರುಣ್ ಜೇಟ್ಲಿ ಸ್ಟೇಡಿಯಂ..!
ಫಿರೋಜ್ ಷಾ ಕೋಟ್ಲಾ ಮೈದಾನವನ್ನು ಶೀಘ್ರದಲ್ಲೇ ಅರುಣ್ ಜೇಟ್ಲಿ ಕ್ರೀಡಾಂಗಣ ಎಂದು ಮರು ನಾಮಕರವಾಗಲಿದೆ. ಇತ್ತೀಚೆಗೆ ನಿಧನರಾದ ಕೇಂದ್ರ ಮಾಜಿ ಸಚಿವ, ದೆಹಲಿ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅರುಣ್ ಜೇಟ್ಲಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಕೋಟ್ಲಾ ಮೈದಾನವನ್ನು ಜೇಟ್ಲಿ ಮೈದಾನ ಎಂದು ಮರುನಾಮಕರ ಮಾಡಲು ನಿರ್ಧರಿಸಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.