
ದುಬೈ(ಫೆ.01): ಮೇ 30ರಿಂದ ಇಂಗ್ಲೆಂಡ್‌ನಲ್ಲಿ ಆರಂಭಗೊಳ್ಳಲಿರುವ ಐಸಿಸಿ ಏಕದಿನ ವಿಶ್ವಕಪ್‌ನ ವೇಳಾಪಟ್ಟಿ ಇತ್ತೀಚೆಗಷ್ಟೇ ಪ್ರಕಟಗೊಂಡಿತ್ತು. ಗುರುವಾರ ಐಸಿಸಿ, ವಿಶ್ವಕಪ್ ಅಭ್ಯಾಸ ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿತು. '
ವಿಶ್ವಕಪ್ ಆಯ್ಕೆಗೆ ಐಪಿಎಲ್ ಪ್ರದರ್ಶನ ಪರಿಗಣಿಸಬಾರದು: ಅಮರನಾಥ್!
ಪ್ರಧಾನ ಸುತ್ತಿಗೂ ಮುನ್ನ ಭಾರತ ತಂಡ 2 ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಮೇ 25ರಂದು ನ್ಯೂಜಿಲೆಂಡ್, ಮೇ 28ರಂದು ಬಾಂಗ್ಲಾದೇಶ ವಿರುದ್ಧ ಪಂದ್ಯವನ್ನಾಡಲಿದೆ. ಇದು 50 ಓವರ್ ಪಂದ್ಯವಾಗಿರಲಿದ್ದು, ಅಧಿಕೃತ ಏಕದಿನ ಮಾನ್ಯತೆ ಇರುವುದಿಲ್ಲ. ಪಂದ್ಯದಲ್ಲಿ 15 ಸದಸ್ಯರು (11 ಬ್ಯಾಟಿಂಗ್, 11 ಫೀಲ್ಡಿಂಗ್) ಕಣಕ್ಕಿಳಿಸಬಹುದಾಗಿದೆ.
ವಿಶ್ವಕಪ್: ಸಚಿನ್ ತೆಂಡುಲ್ಕರ್ 4 ದಾಖಲೆ ಯಾವುತ್ತೂ ಪುಡಿಯಾಗಲ್ಲ!
ಐಪಿಎಲ್ ವೇಳಾಪಟ್ಟಿ ಬದಲಾವಣೆ?: ಸದ್ಯದ ವೇಳಾಪಟ್ಟಿ ಪ್ರಕಾರ ಐಪಿಎಲ್ 12ನೇ ಆವೃತ್ತಿ ಮೇ 19ಕ್ಕೆ ಮುಕ್ತಾಯಗೊಳ್ಳಲಿದೆ. ಮೇ 25ರಂದು ಮೊದಲ ಅಭ್ಯಾಸ ಪಂದ್ಯವಾಡಬೇಕಿರುವ ಭಾರತ, ಮೇ 20ರ ವೇಳೆಗೆ ಇಂಗ್ಲೆಂಡ್‌ಗೆ ತೆರಳಬೇಕಿದೆ. ಹೀಗಾಗಿ ಐಪಿಎಲ್ ವೇಳಾಪಟ್ಟಿಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.