ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಕನ್ನಡಿ ನೋಡಿಕೊಳ್ಳಿ: ವಿರಾಟ್ ಕೊಹ್ಲಿ

By Web DeskFirst Published Aug 4, 2018, 8:25 PM IST
Highlights

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ನೀಡಿದರೂ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಿಗಲಿಲ್ಲ. ಭಾರತ ಸೋಲಿಗೆ ಕಾರಣ ಏನು? ಸೋಲಿನ ಬಳಿಕ ಕೊಹ್ಲಿ ಹೇಳಿದ್ದೇನು? ಇಲ್ಲಿದೆ. 
 

ಎಡ್ಜ್‌ಬಾಸ್ಟನ್(ಆ.04): ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 31 ರನ್‌ಗಳ ಸೋಲು ಅನುಭವಿಸಿತು. ಸೋಲಿನ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳಿಗೆ ಕಿವಿ ಮಾತು ಹೇಳಿದ್ದಾರೆ.  

ಇಂಗ್ಲೆಂಡ್ ವಿರುದ್ಧದ ಸೋಲಿಗೆ ಟೀಂ ಇಂಡಿಯಾ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯವೇ ಮುಖ್ಯ ಕಾರಣ. ಕೇವಲ 194 ರನ್ ಟಾರ್ಗೆಟ್ ಬೆನ್ನಟ್ಟಲು ಸಾಧ್ಯವಾಗದ ಭಾರತ ತಂಡಕ್ಕೆ ಮೊದಲ ಟೆಸ್ಟ್ ಪಂದ್ಯದಲ್ಲಿ ಆಂಗ್ಲರಿಗೆ ಶರಣಾಗಬೇಕಾಯಿತು.

ಸೋಲಿನ ಬಳಿಕ ಟೀಂ ಇಂಡಿಯಾ ನಾಯಕ ಕೊಹ್ಲಿ, ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಕನ್ನಡಿ ನೋಡಿಕೊಳ್ಳಬೇಕು ಎಂದು ಕಿವಿ ಮಾತು ಕೇಳಿದ್ದಾರೆ. ಉಮೇಶ್ ಯಾದವ್, ಇಶಾಂತ್ ಶರ್ಮಾ ಅಂತಿಮ ಹಂತದಲ್ಲಿ ಜೊತೆಯಾಟ ನೀಡಿದ್ದಾರೆ. ಇಂಗ್ಲೆಂಡ್ ಬೌಲಿಂಗ್ ದಾಳಿಯನ್ನ ಎದುರಿಸಿದ್ದಾರೆ. ಇದನ್ನ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳನ್ನ ಅಳವಡಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ನಾಲ್ಕನೇ ದಿನದಾಟದಲ್ಲಿ 5 ವಿಕೆಟ್ ಇದ್ದರೂ 84 ರನ್ ಚೇಸ್ ಮಾಡಲು ಸಾಧ್ಯವಾಗಲಿಲ್ಲ. ಆದರೆ ಮೊದಲ ಇನ್ನಿಂಗ್ಸ್‌ನಲ್ಲಿ ಹಿನ್ನಡೆ ಅನುಭವಿಸಿದ್ದರೂ, ನಾವು ಅತ್ಯುತ್ತಮವಾಗಿ ಕಮ್‌ಬ್ಯಾಕ್ ಮಾಡಿದ್ದೇವು. ಆದರೆ ಗೆಲುವು ನಮ್ಮದಾಗಲಿಲ್ಲ ಎಂದು ಕೊಹ್ಲಿ ಹೇಳಿದ್ದಾರೆ.

click me!