
ಒಲ್ಡ್ ಟ್ರಾಫೋರ್ಡ್(ಜು.01): ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಸದ್ಯ ಇಂಗ್ಲೆಂಡ್‌ನಲ್ಲಿ ಅಭ್ಯಾಸ ಆರಂಭಿಸಿದೆ. ಐರ್ಲೆಂಡ್ ವಿರುದ್ಧದ ಟಿ20 ಪಂದ್ಯದ ಬಳಿಕ ಇಂಗ್ಲೆಂಡ್‌ಗೆ ತಲುಪಿರುವ ಭಾರತ ತಂಡ ಒಲ್ಡ್ ಟ್ರಾಫೋರ್ಡ್‌ನಲ್ಲಿ ಅಭ್ಯಾಸ ಆರಂಭಿಸಿದೆ.
ಇಂಗ್ಲೆಂಡ್ ವಿರುದ್ಧದ 3 ಟಿ20 ಪಂದ್ಯಗಳ ಪೈಕಿ ಮೊದಲ ಪಂದ್ಯ ಒಲ್ಡ್ ಟ್ರಾಫೋರ್ಡ್‌ನಲ್ಲಿ ನಡೆಯಲಿದೆ. ಹೀಗಾಗಿ ಭಾರತ ತಂಡ ಕಠಿಣ ಅಭ್ಯಾಸ ಆರಂಭಿಸಿದೆ. ಟೀಂ ಇಂಡಿಯಾದ ಟ್ರೈನಿಂಗ್ ಸೆಶನ್ ಹೇಗಿರುತ್ತೆ? ಅನ್ನೋದನ್ನ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ವಿವರಿಸಿದ್ದಾರೆ.
ತಂಡದ ಪ್ರತಿಯೊಬ್ಬ ಆಟಗಾರ ಟ್ರೈನಿಂಗ್ ಸೆಶನ್‌ನಲ್ಲಿ ಎನು ಮಾಡಬೇಕು. ಅಭ್ಯಾಸ ಹೇಗಿರಬೇಕು? ಎಷ್ಟು ಹೊತ್ತು ಪ್ರಾಕ್ಟೀಸ್ ಮಾಡಬೇಕು ಅನ್ನೋ ವಿವರವನ್ನ ಬಂಗಾರ್ ಹೇಳಿದ್ದಾರೆ. ಜುಲೈ 3 ರಿಂದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಸರಣಿ ಆರಂಭಗೊಳ್ಳಲಿದೆ. 3 ಟಿ30, 3 ಏಕದಿನ ಹಾಗೂ 5 ಟೆಸ್ಟ್ ಪಂದ್ಯಗಳ ಸುದೀರ್ಘ ಸರಣಿಗಾಗಿ ಭಾರತ ಇಂಗ್ಲೆಂಡ್‌ನಲ್ಲಿ ಬೀಡುಬಿಟ್ಟಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.