ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ-ರಿಷಪ್ ಪಂತ್ ಪದಾರ್ಪಣೆ!

By Web DeskFirst Published Oct 21, 2018, 1:18 PM IST
Highlights

ವೆಸ್ಟ್ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಕೆಲ ಬದಲಾವಣೆಗಳಾಗಿದೆ. ಇಲ್ಲಿದೆ ಟೀಂ ವಿವರ.

ಗುವಹಾಟಿ(ಅ.21): ವೆಸ್ಟ್ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಇಷ್ಟೇ ಅಲ್ಲ ಟೆಸ್ಟ್ ಕ್ರಿಕೆಟ್‌ನಲ್ಲಿ ಅದ್ಬುತ ಬ್ಯಾಟಿಂಗ್ ಪ್ರದರ್ಶನ ನೀಡಿದ  ರಿಷಬ್ ಪಂತ್ ಇದೀಗ ಏಕದಿನಕ್ಕೂ ಪದಾರ್ಪಣೆ ಮಾಡಿದ್ದಾರೆ.

 

win the toss and elect to bowl first against the Windies in the 1st ODI at Guwahati. pic.twitter.com/9V6fzPMSLB

— BCCI (@BCCI)

 

ರಿಷಬ್ ಪಂತ್‌ಗೆ, ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಟೆಸ್ಟ್ ಕ್ಯಾಪ್ ನೀಡಿದರು. ಟೆಸ್ಟ್ ಸರಣಿ ವಶಪಡಿಸಿಕೊಂಡಿರುವ ಟೀಂ ಇಂಡಿಯಾ ಇದೀಗ ಏಕದಿನ ಪಂದ್ಯದಲ್ಲೂ ಶುಭಾರಂಭ ಮಾಡೋ ವಿಶ್ವಾಸದಲ್ಲಿದೆ. 

ಮೊದಲ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಅಂಬಾಟಿ ರಾಯುಡು, ರಿಷಬ್ ಪಂತ್, ಎಂ.ಎಸ್ ಧೋನಿ, ರವೀಂದ್ರ ಜಡೇಜಾ, ಯುಜುವೇಂದ್ರ ಚೆಹಾಲ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಖಲೀಲ್ ಅಹಮ್ಮದ್

click me!