#INDvSA 3ನೇ ಟಿ20: ಟಾಸ್ ಗೆದ್ದ ಭಾರತ ಬ್ಯಾಟಿಂಗ್

By Web Desk  |  First Published Sep 22, 2019, 6:32 PM IST

ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಬೆಂಗಳೂರು ಟಿ20 ಪಂದ್ಯದ ಟಾಸ್ ಪ್ರಕ್ರಿಯೆ ಮುಗಿದೆ. ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡದ ಬದಲಾವಣೆ ಏನು ಇಲ್ಲಿದೆ ವಿವರ.


ಬೆಂಗಳೂರು(ಸೆ.22): ಮಳೆ ಭೀತಿ ನಡುವೆಯೂ ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 3ನೇ ಟಿ20 ಪಂದ್ಯದ ಟಾಸ್ ಪ್ರಕ್ರಿಯೆ ಮುಗಿದಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸೌತ್ ಆಫ್ರಿಕಾ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಬುರನ್ ಹೆಂಡ್ರಿಕ್ಸ್ ತಂಡ ಸೇರಿಕೊಂಡಿದ್ದಾರೆ.

ಭಾರತ ತಂಡ:

Tap to resize

Latest Videos

undefined

ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ರಿಷಬ್ ಪಂತ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಕ್ರುನಾಲ್ ಪಾಂಡ್ಯ, ರವೀಂದ್ರ ಜಡೇಜಾ, ವಾಶಿಂಗ್ಟನ್ ಸುಂದರ್, ದೀಪಕ್ ಚಹಾರ್, ನವದೀಪ್ ಸೈನಿ

3 ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 1-0 ಮುನ್ನಡೆ ಸಾಧಿಸಿದೆ. ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿತ್ತು. ಇದೀಗ ಬೆಂಗಳೂರು ಪಂದ್ಯ ಗೆದ್ದು ಸರಣಿ ಕೈವಶ ಮಾಡಲು ಟೀಂ ಇಂಡಿಯಾ ತುದಿಗಾಲಲ್ಲಿ ನಿಂತಿದೆ.
 

click me!