ಟೀಂ ಇಂಡಿಯಾ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮೊದಲ ಟೆಸ್ಟ್ ಪಂದ್ಯದಲ್ಲಿ ಇನ್ನೊಂದು ವಿಕೆಟ್ ಕಬಳಿಸಿದರೆ, ದಿಗ್ಗಜ ಸ್ಪಿನ್ನರ್ ಮುತ್ತಯ್ಯ ಮುರುಳೀಧರನ್ ವಿಶ್ವದಾಖಲೆಯನ್ನು ಸರಿಗಟ್ಟಲಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
ವೈಜಾಗ್[ಅ.05]: ಟೀಂ ಇಂಡಿಯಾ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 9 ತಿಂಗಳ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಭರ್ಜರಿಯಾಗಿಯೇ ಕಮ್ ಬ್ಯಾಕ್ ಮಾಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ 7 ವಿಕೆಟ್ ಕಬಳಿಸುವ ಮೂಲಕ ದಕ್ಷಿಣ ಆಫ್ರಿಕಾ ತಂಡವನ್ನು 431 ರನ್’ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾದರು. ಇದರ ಜತೆಗೆ ವಿಶ್ವ ಕ್ರಿಕೆಟ್’ನ ಮಾಂತ್ರಿಕ ಸ್ಪಿನ್ನರ್ ಮುತ್ತಯ್ಯ ಮುರುಳೀಧರನ್ ವಿಶ್ವದಾಖಲೆ ಸರಿಗಟ್ಟುವ ಹೊಸ್ತಿಲಲ್ಲಿದ್ದಾರೆ.
ರೋಹಿತ್ ಆರ್ಭಟಕ್ಕೆ 25 ವರ್ಷದ ದಾಖಲೆ ಧೂಳೀಪಟ..!
ಹೌದು, ಅಶ್ವಿನ್ ಇನ್ನೊಂದು ವಿಕೆಟ್ ಪಡೆದರೆ ಮುತ್ತಯ್ಯ ಜತೆ ಅತಿವೇಗವಾಗಿ 350 ವಿಕೆಟ್ ಪಡೆದ ಬೌಲರ್ ಎನ್ನುವ ವಿಶ್ವದಾಖಲೆಗೆ ಪಾತ್ರರಾಗಲಿದ್ದಾರೆ. ಟೆಸ್ಟ್ ಕ್ರಿಕೆಟ್’ನಲ್ಲಿ ಗರಿಷ್ಠ[800] ವಿಕೆಟ್ ಪಡೆದ ಬೌಲರ್ ಎನಿಸಿರುವ ಮುತ್ತಯ್ಯ, 66 ಟೆಸ್ಟ್ ಪಂದ್ಯಗಳಲ್ಲಿ 350 ವಿಕೆಟ್ ಪಡೆದಿದ್ದರು. 2001ರಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲಿ ಮುತ್ತಯ್ಯ 350 ವಿಕೆಟ್ ಪಡೆದ ಸಾಧನೆ ಮಾಡಿದ್ದರು. ಇದೀಗ ಅಶ್ವಿನ್ ಕೂಡಾ 66ನೇ ಟೆಸ್ಟ್ ಪಂದ್ಯವನ್ನಾಡುತ್ತಿದ್ದು, ಈ ದಾಖಲೆ ಸರಿಗಟ್ಟಲು ಇನ್ನೊಂದೇ ವಿಕೆಟ್’ನ ಅವಶ್ಯಕತೆಯಿದೆ. ಇದರ ಜತೆಗೆ ಭಾರತ ಪರ ಅತಿವೇಗವಾಗಿ 350 ವಿಕೆಟ್ ಪಡೆದ ಬೌಲರ್ ಎನ್ನುವ ದಾಖಲೆಗೂ ಅಶ್ವಿನ್ ಪಾತ್ರರಾಗಲಿದ್ದಾರೆ. ಈ ಮೊದಲು ಕನ್ನಡಿಗ ಅನಿಲ್ ಕುಂಬ್ಳೆ 77 ಪಂದ್ಯಗಳನ್ನಾಡಿ 350 ವಿಕೆಟ್ ಪಡೆದಿದ್ದರು.
2ನೇ ಇನಿಂಗ್ಸ್‌ನಲ್ಲೂ ರೋಹಿತ್ ಶತಕ; ವಿಶ್ವದಾಖಲೆ ಬರೆದ ಹಿಟ್‌ಮ್ಯಾನ್!
33 ವರ್ಷದ ರವಿಚಂದ್ರನ್ ಅಶ್ವಿನ್ ಜುಲೈ 2017ರಿಂದೀಚೆಗೆ ರೆಡ್ ಬಾಲ್ ಕ್ರಿಕೆಟ್’ಗಷ್ಟೇ ಸೀಮಿತರಾಗಿದ್ದಾರೆ. ಕಳೆದ ವರ್ಷದ ಡಿಸೆಂಬರ್’ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನಷ್ಟೇ ಆಡಿದ್ದ ಅಶ್ವಿನ್ ಆ ಬಳಿಕ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲೂ ಬೆಂಚ್ ಕಾಯಿಸಿದ್ದರು.