
ರಾಜ್‌ಕೋಟ್(ಅ.04): ವೆಸ್ಟ್ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನ ಮುಕ್ತಾಯಗೊಂಡಿದೆ. ಆದರೆ ಟೀಂ ಇಂಡಿಯಾ ಆಯ್ಕೆ ವಿಚಾರದ ಚರ್ಚೆ ಮಾತ್ರ ಸದ್ಯಕ್ಕೆ ನಿಲ್ಲೋ ಲಕ್ಷಣ ಕಾಣುತ್ತಿಲ್ಲ. ಕನ್ನಡಿಗ ಕರುಣ್ ನಾಯರ್ ಕೈಬಿಟ್ಟ ವಿವಾದ ತಣ್ಣಗಾಗುತ್ತಲೇ ಇದೀಗ ಶಿಖರ್ ಧವನ್ ಆಯ್ಕೆ ಕುರಿತು ವಿವಾದ ಹುಟ್ಟಿಕೊಂಡಿದೆ.
ಜಡೇ ಜಗಳ ಟೀಂ ಇಂಡಿಯಾಗೂ ಕಾಲಿಟ್ಟಿದೆಯಾ? ಹೌದು ಅಂತಿದೆ ವರದಿಗಳು. ವೆಸ್ಟ್ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಶಿಖರ್ ಧವನ್‌ಗೆ ಕೊಕ್ ನೀಡಲಾಗಿದೆ. ಈ ನಿರ್ಧಾರದಿಂದ ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾಹಾಗೂ ಶಿಖರ್ ಧವನ್ ಪತ್ನಿ ಆಯೇಶಾ ನಡುವಿನ ಕಿತ್ತಾಟಕ್ಕೆ ಕಾರಣವಾಗಿದೆ ಎಂದು ದೈನಿಕ್ ಜಾಗ್ರನ್ ವರದಿ ಮಾಡಿದೆ.
ಟೀಂ ಇಂಡಿಯಾದ ಕೆಲ ಮೀಟಿಂಗ್‌ಗಳಲ್ಲಿ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕೂಡ ಪಾಲ್ಗೊಂಡಿದ್ದಾರೆ ಅನ್ನೋದು ದೈನಿಕ್ ಜಾಗ್ರನ್ ವರದಿ ಮಾಡಿದೆ. ಹೀಗಾಗಿ ಧವನ್ ಪತ್ನಿ ಆಯೇಶಾ ಮುಖರ್ಜಿ, ಕೊಹ್ಲಿ ಪತ್ನಿ ಮೇಲೆ ಮುನಿಸಿಕೊಂಡಿದ್ದಾರೆ ಎಂದಿದೆ.
ಏಷ್ಯಾಕಪ್ ಟೂರ್ನಿಯಲ್ಲಿ ಹಾಂಕಾಂಗ್ ಹಾಗೂ ಪಾಕಿಸ್ತಾನ ವಿರುದ್ಧ ಸೆಂಚುರಿ ಸಿಡಿಸೋ ಮೂಲಕ ಟೂರ್ನಿಯಲ್ಲಿ ಗರಿಷ್ಠ ರನ್ ಸ್ಕೋರರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು. ಇಷ್ಟಾದರೂ ಧವನ್ ಆಯ್ಕೆಯಾಗಿಲ್ಲ ಅನ್ನೋದು ಪತ್ನಿ ಅಯೇಶಾ ಸಿಟ್ಟಿಗೆ ಕಾರಣವಾಗಿದೆ ಎನ್ನಲಾಗ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.