
ಚಿತ್ತಗಾಂಗ್[ಸೆ.08]: ಆತಿಥೇಯ ಬಾಂಗ್ಲಾದೇಶ ವಿರುದ್ಧದ ಏಕೈಕ ಟೆಸ್ಟ್‌ನಲ್ಲಿ ಆಫ್ಘಾನಿಸ್ತಾನ ಬಿಗಿ ಹಿಡಿತ ಸಾಧಿಸಿದೆ. 3ನೇ ದಿನದಂತ್ಯಕ್ಕೆ ಆಫ್ಘಾನಿಸ್ತಾನ 2ನೇ ಇನ್ನಿಂಗ್ಸ್‌ನಲ್ಲಿ 8 ವಿಕೆಟ್‌ಗೆ 237 ರನ್ ಕಲೆಹಾಕಿದ್ದು, ಒಟ್ಟು 374 ರನ್ ಮುನ್ನಡೆ ಪಡೆದಿದೆ.
ಟೆಸ್ಟ್: ಬಾಂಗ್ಲಾ ಮೇಲೆ ಆಫ್ಘಾನಿಸ್ತಾನ ಸವಾರಿ!
ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್‌ನಲ್ಲಿ 205 ರನ್‌ಗೆ ಆಲೌಟಾಯಿತು. ರಶೀದ್ ಖಾನ್ 5 ವಿಕೆಟ್ ಕಿತ್ತರು. ಆಫ್ಘನ್ ದ್ವಿತೀಯ ಇನ್ನಿಂಗ್ಸ್‌ನಲ್ಲಿ 28 ರನ್‌ಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಇಬ್ರಾಹಿಂ ಜದ್ರಾನ್ ಹಾಗೂ ಅಸ್ಗರ್ ಆಫ್ಘನ್ 4ನೇ ವಿಕೆಟ್‌ಗೆ 108 ರನ್ ಜೊತೆಯಾಟವಾಡಿ ತಂಡಕ್ಕೆ ನೆರವಾದರು.
ಆಫ್ಘನ್ ಮಾಜಿ ನಾಯಕ ಅಸ್ಗರ್ ಆಫ್ಘನ್[50] ಮತ್ತೊಂದು ಅರ್ಧಶತಕ ಸಿಡಿಸಿದರು. ಇಬ್ರಾಹಿಂ ಜದ್ರಾನ್ 87 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮೊದಲ ಇನಿಂಗ್ಸ್’ನಲ್ಲಿ ಅರ್ಧಶತಕ ಸಿಡಿಸಿದ್ದ ನಾಯಕ ರಶೀದ್ ಖಾನ್ 6 ಬೌಂಡರಿ ನೆರವಿನಿಂದ 24 ರನ್ ಬಾರಿಸಿ ಪೆವಿಲಿಯನ್ ಸೇರಿದರು. ಇದೀಗ ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ಅಫ್ಸರ್ ಜಝೈ[34] ಹಾಗೂ ಯಾಮಿನ್ ಅಹಮ್ಮದ್’ಝೈ [0] ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಸ್ಕೋರ್: ಆಫ್ಘನ್ 342 ಹಾಗೂ 237/8 (3ನೇ ದಿನದಂತ್ಯಕ್ಕೆ),
ಬಾಂಗ್ಲಾ 205
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.