ಥಾಯ್ಲೆಂಡ್‌ ಓಪನ್‌: ಸೈನಾ, ಶ್ರೀಕಾಂತ್‌ ಶುಭಾರಂಭ

Published : Aug 01, 2019, 10:29 AM IST
ಥಾಯ್ಲೆಂಡ್‌ ಓಪನ್‌: ಸೈನಾ, ಶ್ರೀಕಾಂತ್‌ ಶುಭಾರಂಭ

ಸಾರಾಂಶ

ಥಾಯ್ಲೆಂಡ್‌ ಓಪನ್‌ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭರ್ಜರಿ ಶುಭಾರಂಭ ಮಾಡಿದ್ದು, ಎರಡನೇ ಸುತ್ತಿಗೆ ಲಗ್ಗೆಯಿಟ್ಟಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ಬ್ಯಾಂಕಾಕ್‌(ಆ.01): ಭಾರತದ ತಾರಾ ಶಟ್ಲರ್‌ಗಳಾದ ಸೈನಾ ನೆಹ್ವಾಲ್‌ ಹಾಗೂ ಕಿದಂಬಿ ಶ್ರೀಕಾಂತ್‌ ಇಲ್ಲಿ ನಡೆಯುತ್ತಿರುವ ಥಾಯ್ಲೆಂಡ್‌ ಓಪನ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಶುಭಾರಂಭ ಮಾಡಿದ್ದಾರೆ.

ಜಪಾನ್‌ ಓಪನ್‌ ಬ್ಯಾಡ್ಮಿಂಟನ್‌; ಸೆಮೀಸ್‌ನಲ್ಲಿ ಸೋತ ಪ್ರಣೀತ್‌

2 ತಿಂಗಳ ಬಳಿಕ ಅಂಕಣಕ್ಕೆ ಮರಳಿದ ಸೈನಾ, ಮಹಿಳಾ ಸಿಂಗಲ್ಸ್‌ ಮೊದಲ ಸುತ್ತಿನಲ್ಲಿ ಸ್ಥಳೀಯ ಆಟಗಾರ್ತಿ ಚೈವಾನ್‌ ವಿರುದ್ಧ 21-17, 21-19 ಗೇಮ್‌ಗಳಲ್ಲಿ ಗೆಲುವು ಸಾಧಿಸಿದರು. ಪುರುಷರ ಸಿಂಗಲ್ಸ್‌ ಮೊದಲ ಸುತ್ತಿನ ಪಂದ್ಯದಲ್ಲಿ ಶ್ರೀಕಾಂತ್‌, ಎಚ್‌.ಎಸ್‌.ಪ್ರಣಯ್‌, ಪಾರುಪಲ್ಲಿ ಕಶ್ಯಪ್‌ ಹಾಗೂ ಶುಭಾಂಕರ್‌ ಡೇ 2ನೇ ಸುತ್ತಿಗೆ ಪ್ರವೇಶ ಪಡೆದರು.

ಇದೇ ವೇಳೆ ಮಿಶ್ರ ಡಬಲ್ಸ್‌ ಮೊದಲ ಸುತ್ತಿನಲ್ಲಿ ಅಶ್ವಿನಿ ಪೊನ್ನಪ್ಪ ಹಾಗೂ ಸಾತ್ವಿಕ್‌ ಸಾಯಿರಾಜ್‌, ಒಲಿಂಪಿಕ್‌ ಬೆಳ್ಳಿ ಪದಕ ವಿಜೇತ ಮಲೇಷ್ಯದ ಚಾನ್‌ ಪೆಂಗ್‌ ಹಾಗೂ ಲಿಯು ಯಿಂಗ್‌ ಜೋಡಿ ವಿರುದ್ಧ 21-18, 18-21, 21-17 ಗೇಮ್‌ಗಳಲ್ಲಿ ಗೆದ್ದು ಅಚ್ಚರಿ ಮೂಡಿಸಿದರು.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಮಿನಿ ಹರಾಜಿನಲ್ಲಿ ಅತಿಹೆಚ್ಚು ಮೊತ್ತಕ್ಕೆ ಬಿಡ್ ಆಗೋದು ಯಾರು? ಅಚ್ಚರಿ ಭವಿಷ್ಯ ನುಡಿದ AI
ವಿರಾಟ್ ಕೊಹ್ಲಿ to ಕೆಎಲ್ ರಾಹುಲ್, ಭಾರತೀಯ ಕ್ರಿಕೆಟಿಗರಲ್ಲಿದೆ ಅತೀ ದುಬಾರಿ ಕಾರು