16 ವರ್ಷ ಕಳೆದರೂ ಮತ್ತೆ-ಮತ್ತೆ ನೆನಪಾಗುವ ಆ ಇನಿಂಗ್ಸ್..!

Published : Mar 14, 2017, 04:30 PM ISTUpdated : Apr 11, 2018, 12:41 PM IST
16 ವರ್ಷ ಕಳೆದರೂ ಮತ್ತೆ-ಮತ್ತೆ ನೆನಪಾಗುವ ಆ ಇನಿಂಗ್ಸ್..!

ಸಾರಾಂಶ

ಭಾರತ ತಂಡ ವಿವಿಎಸ್ ಲಕ್ಷ್ಮಣ್ ಹಾಗೂ ರಾಹುಲ್ ದ್ರಾವಿಡ್ ಅವರ ಅತ್ಯಮೋಘ ಆಟದ ನೆರವಿನಿಂದ 171 ರನ್‌ಗಳ ಅವಿಸ್ಮರಣೀಯ ಗೆಲುವು ಸಾಧಿಸಿ ಸರಣಿಯಲ್ಲಿ ಸಮಬಲ ಸಾಧಿಸಿತ್ತು.

ಮುಂಬೈ(ಮಾ.14): ಭಾರತದ ಕ್ರಿಕೆಟ್ ಕಾಶಿ ಕೊಲ್ಕತಾದ ಈಡನ್ ಗಾರ್ಡನ್ಸ್ ಮೈದಾನ ಮಾರ್ಚ್ 14, 2001ರಂದು ಐತಿಹಾಸಿಕ ಪಂದ್ಯವೊಂದಕ್ಕೆ ಸಾಕ್ಷಿಯಾಗಿ ಇಂದಿಗೆ 16 ವರ್ಷಗಳೇ ಕಳೆದಿವೆ. ಆದರೂ ಆ ಇನಿಂಗ್ಸ್ ಭಾರತೀಯ ಕ್ರಿಕೆಟ್ ಪ್ರಿಯರಲ್ಲಿ ಅಚ್ಚಳಿಯದೇ ಉಳಿದಿದೆ ಎಂದರೆ ಅತಿಶಯೋಕ್ತಿಯಲ್ಲ.

ಆಸ್ಟ್ರೇಲಿಯಾ ವಿರುದ್ಧ ಮೊದಲ ಇನ್ನಿಂಗ್ಸ್‌ನಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದ ಭಾರತ ತಂಡ ವಿವಿಎಸ್ ಲಕ್ಷ್ಮಣ್ ಹಾಗೂ ರಾಹುಲ್ ದ್ರಾವಿಡ್ ಅವರ ಅತ್ಯಮೋಘ ಆಟದ ನೆರವಿನಿಂದ 171 ರನ್‌ಗಳ ಅವಿಸ್ಮರಣೀಯ ಗೆಲುವು ಸಾಧಿಸಿ ಸರಣಿಯಲ್ಲಿ ಸಮಬಲ ಸಾಧಿಸಿತ್ತು.

ಮೊದಲ ಇನ್ನಿಂಗ್ಸ್‌ನಲ್ಲಿ 171 ರನ್‌ಗೆ ಆಲೌಟ್ ಆಗಿದ್ದ ಭಾರತ, ಆಸ್ಟ್ರೇಲಿಯಾಗೆ 274 ರನ್ ಮುನ್ನಡೆ ಬಿಟ್ಟುಕೊಟ್ಟಿತ್ತು. ಆದರೆ, ದ್ವಿತೀಯ ಇನ್ನಿಂಗ್ಸ್‌ನಲ್ಲಿ ಲಕ್ಷ್ಮಣ್ 281 ಹಾಗೂ ದ್ರಾವಿಡ್ 180 ರನ್‌ಗಳ ಸೊಗಸಾದ ಆಟದಿಂದ ಭಾರತ 7 ವಿಕೆಟ್ ನಷ್ಟಕ್ಕೆ 657 ರನ್ ಪೇರಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಟೀಂ ಇಂಡಿಯಾ ನೀಡಿದ 384 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಕಾಂಗರೂ ಪಡೆ 212 ರನ್‌'ಗಳಿಗೆ ಆಲೌಟ್ ಆಗಿ ಭಾರತಕ್ಕೆ ಶರಣಾಗಿತ್ತು.

ಹೀಗಿತ್ತು ಆ ಪಂದ್ಯ....

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಿ20 ವಿಶ್ವಕಪ್ ತಂಡದಲ್ಲಿ ಸಂಚಲನ: ಸಂಜು ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು?
ಕೊಹ್ಲಿ-ರೋಹಿತ್ ಮುಂದಿನ ವಿಜಯ್ ಹಜಾರೆ ಟ್ರೋಫಿ ಮ್ಯಾಚ್ ಆಡೋದು ಯಾವಾಗ? ಲೈವ್ ಸ್ಟ್ರೀಮ್ ಇರುತ್ತಾ?