
ಬೆಂಗಳೂರು(ಮೇ.15): ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಜಯದೊಂದಿಗೆ ಮುಕ್ತಾಯಗೊಳಿಸಿದೆ.
ಸತತ ಸೋಲುಗಳಿಂದ ಕಂಗೆಟ್ಟಿದ್ದ ವಿರಾಟ್ ಕೊಹ್ಲಿ ನೇತೃತ್ವದ ಆರ್’ಸಿಬಿ ಡೆಲ್ಲಿ ಡೇರ್’ಡೆವಿಲ್ಸ್ ಎದುರು 10 ರನ್ ಅಂತರದ ಜಯ ಸಾಧಿಸಿ ತನ್ನ ಈ ಬಾರಿಯ ಅಭಿಯಾನವನ್ನು ಅಂತ್ಯಗೊಳಿಸಿದೆ.
ಆದರೆ ಹೊಸ ವಿಷಯ ಏನಪ್ಪಾ ಅಂದ್ರೆ ಈ ಬಾರಿ ಎಬಿಡಿ ಆಡಿದ 9 ಪಂದ್ಯದಲ್ಲಿ ಆರ್’ಸಿಬಿ ಒಮ್ಮೆಯೂ ಗೆಲುವಿನ ರುಚಿ ನೋಡಲು ಸಾಧ್ಯವಾಗಲಿಲ್ಲ. ಕೊನೆಯ ಪಂದ್ಯಕ್ಕೂ ಮುನ್ನ ಎಬಿಡಿ ತವರಿಗೆ ಮರಳಿದ್ದರಿಂದ ಗೆದ್ದ ಪಂದ್ಯ ಸಾಕ್ಷಿಯಾಗುವಲ್ಲಿ ವಿಫಲರಾದರು. ಈ ಮೂಲಕ ಐಪಿಎಲ್’ನ ಒಂದೇ ಆವೃತ್ತಿಯಲ್ಲಿ ಅತಿಹೆಚ್ಚು ಸೋಲು ನೋಡಿದ ಆಟಗಾರ ಎನ್ನುವ ಅಪಖ್ಯಾತಿಗೆ ಎಬಿಡಿ ಗುರಿಯಾಗಿದ್ದಾರೆ.
ಅದೇರೀತಿ ಸ್ಯಾಮ್ಯುಯಲ್ ಬದ್ರಿ ಕೂಡಾ ಈ ಆವೃತ್ತಿಯಲ್ಲಿ ಆಡಿದ 7 ಪಂದ್ಯಗಳಲ್ಲಿ ಒಂದೂ ಗೆಲುವಿನ ರುಚಿ ಸವಿಯಲು ಸಾಧ್ಯವಾಗಲಿಲ್ಲ.
ಈ ಮೊದಲು 2012ರಲ್ಲಿ ಡ್ಯಾನಿಯಲ್ ಕ್ರಿಸ್ಟೀನ್ ಹಾಗೂ 2008ರಲ್ಲಿ ರವಿ ತೇಜ ತಾವಾಡಿದ 7 ಪಂದ್ಯಗಳಲ್ಲಿ ಸೋಲಿನ ರುಚಿ ಕಂಡಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.