
ಕೋಲ್ಕತಾ(ಆ.21): ಕೇಂದ್ರ ನೂತನವಾಗಿ ಜಾರಿಗೆ ತಂದಿರುವ ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್‌ಟಿ), ಕ್ರಿಕೆಟ್ ಪಂದ್ಯಗಳ ಮೇಲೂ ಪರಿಣಾಮ ಬೀರಿದ್ದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಏಕದಿನ ಸರಣಿಯ ಟಿಕೆಟ್ ದರ ಕೂಡ ಹೆಚ್ಚಾಗಿದೆ. ಟಿಕೆಟ್ ದರದ ಮೇಲೆ ಶೇಕಡ 28ರಷ್ಟು ಜಿಎಸ್‌ಟಿ ವಿಧಿಸಬೇಕಾಗಿರುವ ಹಿನ್ನೆಲೆಯಲ್ಲಿ 500 ಇದ್ದಂತಹ ಟಿಕೆಟ್ ದರ 650ಕ್ಕೇರಿದೆ. 1000 ಹಾಗೂ 1500 ಇದ್ದಂತಹ ಟಿಕೆಟ್ ದರ ಕ್ರಮವಾಗಿ 1300, 1900ಕ್ಕೆ ಏರಿಕೆ ಆಗಿದೆ. ಇನ್ನು ಟೆಸ್ಟ್ ಪಂದ್ಯಗಳ ಟಿಕೆಟ್‌ಗಳಿಗೆ ಜಿಎಸ್‌ಟಿ ಅನ್ವಯವಾಗುವುದಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.