ಬಿಸಿಸಿಐ ಅಧಿಕಾರಿಗಳ ವಿರುದ್ಧ ಸುಪ್ರೀಂ ಗರಂ

Published : Sep 22, 2017, 12:03 AM ISTUpdated : Apr 11, 2018, 12:51 PM IST
ಬಿಸಿಸಿಐ ಅಧಿಕಾರಿಗಳ ವಿರುದ್ಧ ಸುಪ್ರೀಂ ಗರಂ

ಸಾರಾಂಶ

ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ತ್ರಿ ಸದಸ್ಯ ಪೀಠ, ನ್ಯಾಯಾಲಯದ ಅಂತಿಮ ತೀರ್ಪು ಪ್ರಕಟಿಸುವ ವೇಳೆಗೆ ಲೋಧಾ ಸಮಿತಿ ಶಿಫಾರಸುಗಳನ್ನು ಒಳಗೊಂಡ ಬಿಸಿಸಿಐನ ಸಂವಿಧಾನದ ಕರಡು ಪ್ರತಿಯನ್ನು ಸಿದ್ಧ ಪಡಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸುವಂತೆ ಸೂಚಿಸಿದೆ

ನವದೆಹಲಿ(ಸೆ.22): ಬಿಸಿಸಿಐನ ಕರಡು ಸಂವಿಧಾನ ವಿಚಾರದಲ್ಲಿ ಸೂಕ್ತ ಸಲಹೆಗಳನ್ನು ನೀಡದೆ ಹೋದರೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಬಿಸಿಸಿಐನ ಮೂವರು ಉನ್ನತ ಅಧಿಕಾರಿಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ತ್ರಿ ಸದಸ್ಯ ಪೀಠ, ನ್ಯಾಯಾಲಯದ ಅಂತಿಮ ತೀರ್ಪು ಪ್ರಕಟಿಸುವ ವೇಳೆಗೆ ಲೋಧಾ ಸಮಿತಿ ಶಿಫಾರಸುಗಳನ್ನು ಒಳಗೊಂಡ ಬಿಸಿಸಿಐನ ಸಂವಿಧಾನದ ಕರಡು ಪ್ರತಿಯನ್ನು ಸಿದ್ಧ ಪಡಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸುವಂತೆ ಸೂಚಿಸಿದೆ. ಸಂವಿಧಾನದ ಕರಡು ರಚನೆ ವಿಚಾರದಲ್ಲಿ ಮೊಂಡುತನ ತೋರಿಸುವುದು ಸರಿಯಲ್ಲ ಎಂದು ಬಿಸಿಸಿಐ ಅಧಿಕಾರಿಗಳಾದ ಸಿ.ಕೆ.ಖನ್ನಾ, ಅಮಿತಾಬ್ ಚೌಧರಿ ಹಾಗೂ ಅನಿರುದ್ಧ್ ಚೌಧರಿ ವಿರುದ್ಧ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಅ.೨೩ರೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಬೆನ್ನಲ್ಲೇ ಖಡಕ್ ವಾರ್ನಿಂಗ್ ಕೊಟ್ಟ ಇಶಾನ್ ಕಿಶನ್! ವೈಭವ್ ಸೂರ್ಯವಂಶಿ ರೆಕಾರ್ಡ್ ಧೂಳೀಪಟ
ವೈಭವ್ ಸೂರ್ಯವಂಶಿ ಆಟಕ್ಕೆ ಎಬಿಡಿ ದಾಖಲೆ ನುಚ್ಚುನೂರು! 14 ವರ್ಷದ ಬ್ಯಾಟರ್ ಪಾಲಾದ ಅಪರೂಪದ ದಾಖಲೆ