ಭಾರತ-ಇಂಗ್ಲೆಂಡ್ ಏಕದಿನ: 3ನೇ ವಿಕೆಟ್ ಪತನ-ಸಂಕಷ್ಟದಲ್ಲಿ ಟೀಂ ಇಂಡಿಯಾ

Published : Jul 14, 2018, 08:49 PM IST
ಭಾರತ-ಇಂಗ್ಲೆಂಡ್ ಏಕದಿನ: 3ನೇ ವಿಕೆಟ್ ಪತನ-ಸಂಕಷ್ಟದಲ್ಲಿ ಟೀಂ ಇಂಡಿಯಾ

ಸಾರಾಂಶ

ಇಂಗ್ಲೆಂಡ್ ನೀಡಿದ 323 ರನ್ ಟಾರ್ಗೆಟ್ ಚೇಸ್ ಮಾಡುತ್ತಿರುವ ಟೀಂ ಇಂಡಿಯಾ ದಿಟ್ಟ ಉತ್ತರ ನೀಡುವಲ್ಲಿ ವಿಫಲವಾಗಿದೆ. ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಆಂಗ್ಲರ ದಾಳಿಗೆ ತತ್ತರಿಸಿದೆ. ಈ ರೋಚಕ ಪಂದ್ಯದ ಅಪ್‌ಡೇಟ್ಸ್ ಇಲ್ಲಿದೆ.

ಲಂಡನ್(ಜು.14): ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ. ಇಂಗ್ಲೆಂಡ್  ನೀಡಿದ 323 ರನ್ ಟಾರ್ಗೆಟ್ ಬೆನ್ನಟ್ಟುತ್ತಿರುವ ಭಾರತ ತಂಡ ದಿಢೀರ್ 3 ವಿಕೆಟ್ ಕಳೆದುಕೊಂಡಿದೆ.

ಡಿಸೆಂಟ್ ಆರಂಭ ಪಡೆದುಕೊಂಡಿದ್ದ ಭಾರತ 49 ರನ್ ಗಳಿಸುವಷ್ಟರಲ್ಲೇ ಮೊದಲ ವಿಕೆಟ್ ಕಳೆದುಕೊಂಡಿತು. ರೋಹಿತ್ ಶರ್ಮಾ 15 ರನ್‌ಗಳಿಸಿ ನಿರ್ಗಮಿಸಿದರು. ಶಿಖರ್ ಧವನ್ 36 ರನ್‌ಗಳ ಕಾಣಿಕೆ ನೀಡಿದರು.

ಭರ್ಜರಿ ಫಾರ್ಮ್‌ನಲ್ಲಿದ್ದ ಕೆಎಲ್ ರಾಹುಲ್ ಶೂನ್ಯಕ್ಕೆ ಔಟಾದರು. ಇದರೊಂದಿಗೆ ಟೀಂ ಇಂಡಿಯಾ 60 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿತು. ಸದ್ಯ ವಿರಾಟ್ ಕೊಹ್ಲಿ ಹಾಗೂ ಸುರೇಶ್ ರೈನಾ ತಂಡಕ್ಕೆ ಆಸರೆಯಾಗಿದ್ದಾರೆ.

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 7 ವಿಕೆಟ್ ನಷ್ಟಕ್ಕೆ 322 ರನ್ ಸಿಡಿಸಿತು. ಜೋ ರೂಟ್ ಭರ್ಜರಿ ಅಜೇಯ 113 ರನ್ ಸಿಡಿಸೋ ಮೂಲಕ ಇಂಗ್ಲೆಂಡ್ ತಂಡ ಬೃಹತ್ ಮೊತ್ತ ಪೇರಿಸುವಲ್ಲಿ ನೆರವಾದರು.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಿನಿ ಹರಾಜಿನ ಬೆನ್ನಲ್ಲೇ KKR ತಂಡಕ್ಕೆ ಬಿಗ್ ಶಾಕ್! ₹9.2 ಕೋಟಿ ನೀಡಿ ಖರೀದಿಸಿದ ಈ ಸ್ಟಾರ್ ಕ್ರಿಕೆಟಿಗ ಐಪಿಎಲ್ ಆಡೋದೇ ಡೌಟ್!
ಟಿ20 ರ್‍ಯಾಂಕಿಂಗ್‌ನಲ್ಲಿ ಬುಮ್ರಾ ದಾಖಲೆ ಧೂಳೀಪಟ; ವರುಣ್ ಚಕ್ರವರ್ತಿ ಹೊಸ ದಾಖಲೆ