ಬಿಸಿಸಿಐ ಆಯ್ಕೆ ಸಮಿತಿ ವಿರುದ್ಧ ಮತ್ತೆ ಗರಂ ಆದ ಟ್ವಿಟರಿಗರು!

Published : Sep 30, 2018, 02:37 PM IST
ಬಿಸಿಸಿಐ ಆಯ್ಕೆ ಸಮಿತಿ ವಿರುದ್ಧ ಮತ್ತೆ ಗರಂ ಆದ ಟ್ವಿಟರಿಗರು!

ಸಾರಾಂಶ

ಏಷ್ಯಾಕಪ್ ಸರಣಿ ಗೆಲುವಿನ ಬೆನ್ನಲ್ಲೇ ವೆಸ್ಟ್ಇಂಡೀಸ್ ವಿರುದ್ಧದ ಟೆಸ್ಟ್  ಸರಣಿಗೆ ತಯಾರಿ ಆರಂಭಗೊಂಡಿದೆ. ಆಯ್ಕೆ ಸಮಿತಿ ಈಗಾಗಲೇ ತಂಡ ಕೂಡ ಆಯ್ಕೆ ಮಾಡಿದೆ. ಆದರೆ ಸೆಲೆಕ್ಷನ್ ಕಮಿಟಿ ಮತ್ತೆ ಟ್ವಟರಿಗರ ಆಕ್ರೋಶಕ್ಕೆ ತುತ್ತಾಗಿದೆ. 

ಮುಂಬೈ(ಸೆ.30): ವೆಸ್ಟ್ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಆಯ್ಕೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಕನ್ನಡಿಗ ಮಯಾಂಕ್ ಅಗರ್ವಾಲ್‌ಗೆ ಸ್ಥಾನ ನೀಡಲಾಗಿದೆ. ಇಷ್ಟಾದರೂ ಆಯ್ಕೆ ಸಮಿತಿ ವಿರುದ್ಧ ಮಾಜಿ ಕ್ರಿಕೆಟಿಗರು ಸೇರಿದಂತೆ ಟ್ವಿಟರಿಗರು ಗರಂ ಆಗಿದ್ದಾರೆ.

ಏಷ್ಯಾಕಪ್ ಟೂರ್ನಿಯಲ್ಲಿ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಿಂದ ರೋಹಿತ್ ಶರ್ಮಾ ತಂಡವನ್ನ ಮುನ್ನಡೆಸಿದ್ದರು. ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ರೋಚಕ ಗೆಲುವು ಸಾಧಿಸೋ ಮೂಲಕ ಏಷ್ಯಾ ಕಪ್ ಪ್ರಶಸ್ತಿ ಗೆದ್ದುಕೊಂಡಿತು. ಇಷ್ಟೇ ಅಲ್ಲ ಟೂರ್ನಿಯಲ್ಲಿ ನಾಯಕ ರೋಹಿತ್ ಅದ್ಬುತ ಪ್ರದರ್ಶನ ನೀಡಿದ್ದಾರೆ. ಇಷ್ಟಾದರೂ ಟೆಸ್ಟ್ ತಂಡದಲ್ಲಿ ರೋಹಿತ್‌ಗೆ ಅವಕಾಶ ಸಿಕ್ಕಿಲ್ಲ. ಇದು ಟ್ವಿಟರಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಮಾಜಿ ನಾಯಕ ಸೌರವ್ ಗಂಗೂಲಿ ಕೂಡ ಆಯ್ಕೆ ಸಮಿತಿ ನಿರ್ಧಾರವನ್ನ ಪ್ರಕಟಿಸಿದ್ದಾರೆ. ರೋಹಿತ್‍‌ಗೆ ಅವಕಾಶ ಸಿಕ್ಕಿಲ್ಲ ಅನ್ನೋದು ಆಶ್ಚರ್ಯ ತಂದಿದೆ ಎಂದಿದ್ದಾರೆ. ಇದರ ಜೊತೆಗೆ ಟ್ವಿಟರಿಗರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

U19 Asia Cup ವೈಭವ್ ಸೂರ್ಯವಂಶಿ ದ್ವಿಶತಕ ಜಸ್ಟ್‌ ಮಿಸ್; ಉದ್ಘಾಟನಾ ಪಂದ್ಯದಲ್ಲೇ ಬೃಹತ್ ಮೊತ್ತ ಗಳಿಸಿದ ಭಾರತ!
U19 Asia Cup: ಮತ್ತೆ ಸಿಕ್ಸರ್ ಸುರಿಮಳೆ ಹರಿಸಿ ಸ್ಪೋಟಕ ಶತಕ ಚಚ್ಚಿದ ವೈಭವ್ ಸೂರ್ಯವಂಶಿ!