
ಬೆಂಗಳೂರು[ಸೆ.26]: ಭಾರತ-ಆಫ್ಘಾನಿಸ್ತಾನ ನಡುವಿನ ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಪಂದ್ಯ ರೋಚಕ ಟೈನಲ್ಲಿ ಅಂತ್ಯವಾಗಿದೆ. ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಟೀಂ ಇಂಡಿಯಾ ಕೊನೆಯಾ ಕ್ಷಣದಲ್ಲಿ ಎಡವಿದರೆ, ಆಫ್ಘಾನ್ ಕೂಡಾ ಮತ್ತೊಮ್ಮೆ ಕೊನೆಯ ಓವರ್’ನಲ್ಲಿ ಗೆಲ್ಲುವ ಅವಕಾಶ ಕೈಚೆಲ್ಲಿತು.
ಸಾಕಷ್ಟು ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಫ್ಘಾನ್ ಮೊಹಮ್ಮದ್ ಶೆಹಜಾದ್ ಅವರ ಆಕರ್ಷಕ ಶತಕದ ನೆರವಿನಿಂದ 8 ವಿಕೆಟ್ ಕಳೆದುಕೊಂಡು 252 ರನ್ ಕಲೆಹಾಕಿತ್ತು. ಇದಕ್ಕುತ್ತರವಾಗಿ ಭಾರತ ಉತ್ತಮ ಆರಂಭವನ್ನೇ ಪಡೆಯಿತು. ಆರಂಭಿಕರಾದ ರಾಹುಲ್-ಅಂಬಟಿ ರಾಯುಡು ಜೋಡಿ ಮೊದಲ ವಿಕೆಟ್’ಗೆ 110 ರನ್’ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಭದ್ರ ಬುನಾದಿ ಹಾಕಿತು. ಆದರೆ ಮಧ್ಯಮ ಕ್ರಮಾಂಕ ನಾಟಕೀಯ ಕುಸಿತ ಕಾಣುವುದರೊಂದಿಗೆ ಸೋಲಿನತ್ತ ಮುಖಮಾಡಿತು. ಕೊನೆಯಲ್ಲಿ ಜಡೇಜಾ ಬ್ಯಾಟಿಂಗ್ ನೆರವಿನಿಂದ ಡ್ರಾ ಸಾಧಿಸಿತಾದರೂ ಟೀಂ ಇಂಡಿಯಾ ಗೆಲ್ಲಲು ಸಾಧ್ಯವಾಗಲಿಲ್ಲ.
ಈ ರೋಚಕ ಪಂದ್ಯ ವೀಕ್ಷಿಸಿದ ಸೆಹ್ವಾಗ್-ಕೈಫ್ ಸೇರಿದಂತೆ ಹಲವರು ಏನಂದ್ರ ನೀವೇ ನೋಡಿ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.