ಕಿವೀಸ್ ನೆಲದಲ್ಲಿ ಭಾರತಕ್ಕೆ ಮೊದಲ ಟಿ20 ಜಯ: ಮನಸೋತ ಟ್ವಿಟರಿಗರು

Published : Feb 08, 2019, 05:01 PM IST
ಕಿವೀಸ್ ನೆಲದಲ್ಲಿ ಭಾರತಕ್ಕೆ ಮೊದಲ ಟಿ20 ಜಯ: ಮನಸೋತ ಟ್ವಿಟರಿಗರು

ಸಾರಾಂಶ

ಟಾಸ್ ಗೆದ್ದ ನ್ಯೂಜಿಲೆಂಡ್ ಕಾಲಿನ್ ಡಿ ಗ್ರಾಂಡ್’ಹೋಂ[50], ರಾಸ್ ಟೇಲರ್ 42 ಆಕರ್ಷಕ ಬ್ಯಾಟಿಂಗ್ ನೆರವಿನಿಂದ 8 ವಿಕೆಟ್ ಕಳೆದುಕೊಂಡು 158 ರನ್ ಗಳಿಸಿತ್ತು. ಸವಾಲಿನ ಗುರಿ ಬೆನ್ನತ್ತಿದ ಭಾರತ 7 ವಿಕೆಟ್’ಗಳ ಭರ್ಜರಿ ಜಯ ಸಾಧಿಸಿತು.

ಬೆಂಗಳೂರು[ಫೆ.08]: ಟೀಂ ಇಂಡಿಯಾ ಕೊನೆಗೂ ನ್ಯೂಜಿಲೆಂಡ್ ನೆಲದಲ್ಲಿ ಚೊಚ್ಚಲ ಟಿ20 ಗೆಲುವು ದಾಖಲಿಸಿದೆ. ಈ ಮೂಲಕ 2009ರಿಂದಲೂ ಮರೀಚಿಕೆಯಾಗಿದ್ದ ಗೆಲುವನ್ನು ನನಸಾಗಿಸಿಕೊಳ್ಳುವಲ್ಲಿ ರೋಹಿತ್ ಪಡೆ ಯಶಸ್ವಿಯಾಗಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ 1-1ರ ಸಮಬಲ ಸಾಧಿಸಿದಂತಾಗಿದೆ.

ಕಿವೀಸ್ ನೆಲದಲ್ಲಿ ಚೊಚ್ಚಲ ಟಿ20 ಗೆಲುವಿನ ಸಿಹಿ ಕಂಡ ಭಾರತ

ಟಾಸ್ ಗೆದ್ದ ನ್ಯೂಜಿಲೆಂಡ್ ಕಾಲಿನ್ ಡಿ ಗ್ರಾಂಡ್’ಹೋಂ[50], ರಾಸ್ ಟೇಲರ್ 42 ಆಕರ್ಷಕ ಬ್ಯಾಟಿಂಗ್ ನೆರವಿನಿಂದ 8 ವಿಕೆಟ್ ಕಳೆದುಕೊಂಡು 158 ರನ್ ಗಳಿಸಿತ್ತು. ಸವಾಲಿನ ಗುರಿ ಬೆನ್ನತ್ತಿದ ಭಾರತ 7 ವಿಕೆಟ್’ಗಳ ಭರ್ಜರಿ ಜಯ ಸಾಧಿಸಿತು. ರೋಹಿತ್ ಶರ್ಮಾ 50, ರಿಷಭ್ ಪಂತ್ 40, ಶಿಖರ್ ಧವನ್ 30, ಧೋನಿ 20, ವಿಜಯ್ ಶಂಕರ್ 14 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ಮೊದಲ ಟಿ20 ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ 80 ರನ್’ಗಳ ಹೀನಾಯ ಸೋಲು ಕಂಡಿದ್ದ ಭಾರತ, ಎರಡನೇ ಪಂದ್ಯದಲ್ಲಿ ಅಮೋಘ ಕಮ್’ಬ್ಯಾಕ್ ಮಾಡಿದೆ. ಆರಂಭಿಕರಾದ ಧವನ್-ರೋಹಿತ್ ಜೋಡಿ 79 ರನ್’ಗಳ ಜತೆಯಾಟ, ಆ ಬಳಿಕ ಮಧ್ಯಮ ಕ್ರಮಾಂಕದವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಭಾರತ ಸುಲಭ ಜಯ ದಾಖಲಿಸಿದೆ.

ಟೆಸ್ಟ್, ಒನ್ ಡೇ ಕ್ರಿಕೆಟ್’ನಲ್ಲಿ ಸಚಿನ್ ಬಾಸ್, ಟಿ20 ರನ್ ಬೇಟೆಯಲ್ಲಿ ರೋಹಿತ್ ಕಿಂಗ್..!

ಟೀಂ ಇಂಡಿಯಾ ಪ್ರದರ್ಶನ ಕಂಡ ಟ್ವಿಟರಿಗರು ಏನಂದ್ರು ನೀವೇ ನೋಡಿ...   


 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?