
ಸತತ ವೈಫಲ್ಯಗಳಿಂದ ರೋಹಿತ್ ಶರ್ಮಾ ಹೊರಬಂದಿದ್ದಾರೆ. ರೋಹಿತ್ ಶರ್ಮಾ ಬಾರಿಸಿದ ಆಕರ್ಷಕ (115 ರನ್'ಗಳ) ಶತಕದ ನೆರವಿನಿಂದ ಟೀಂ ಇಂಡಿಯಾ 274 ರನ್ ಕಲೆಹಾಕಿದೆ.
ಒಂದು ಹಂತದಲ್ಲಿ ಟೀಂ ಇಂಡಿಯಾ 300ಕ್ಕೂ ಹೆಚ್ಚು ರನ್ ಕಲೆಹಾಕಬಹುದು ಎಂದು ಕ್ರಿಕೆಟ್ ಅಭಿಮಾನಿಗಳು ಭಾವಿಸಿದ್ದರು. ಆದರೆ ಮಧ್ಯಮ ಕ್ರಮಾಂಕ ದಿಢೀರ್ ಕುಸಿತ ಕಂಡಿದ್ದರಿಂದ ಅಭಿಮಾನಿಗಳ ನಿರೀಕ್ಷೆ ತಲೆಕೆಳಗಾಯಿತು. 236 ರನ್'ಗಳಿಗೆ 3 ವಿಕೆಟ್ ಕಳೆದುಕೊಂಡಿದ್ದ ಭಾರತ ಆಬಳಿಕ ಸತತ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಕಳೆದುಕೊಂಡಿತು. ಹಾರ್ದಿಕ್ ಪಾಂಡ್ಯ ಶೂನ್ಯ ಸುತ್ತಿ ಮತ್ತೊಮ್ಮೆ ನಿರಾಸೆ ಮೂಡಿಸಿದರು. ಧೋನಿಯಿಂದ ಕೂಡಾ ಸ್ಫೋಟಕ ಬ್ಯಾಟಿಂಗ್ ಮೂಡಿ ಬರಲಿಲ್ಲ. ಟೀಂ ಇಂಡಿಯಾ ಬ್ಯಾಟಿಂಗ್ ಪ್ರದರ್ಶನದ ಬಗ್ಗೆ ನೆಟ್ಟಿಗರು ಪ್ರತಿಕ್ರಿಯಿಸಿದ್ದು ಹೀಗೆ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.