
ಬೆಂಗಳೂರು[ಸೆ.01]: ಇದೇ ಸೆಪ್ಟೆಂಬರ್ 15ರಿಂದ ಆರಂಭವಾಗಲಿರುವ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ವರ್ಷಾಂತ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳುತ್ತಿದ್ದು, ಅಲ್ಲಿಯವರೆಗೆ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲು ಬಿಸಿಸಿಐ ಆಯ್ಕೆ ಸಮಿತಿ ತೀರ್ಮಾನಿಸಿದೆ ಎನ್ನಲಾಗುತ್ತಿದೆ.
ಭಾರತ ತಂಡದ ರನ್ ಮಷೀನ್ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿದ್ದಾರೆ ಎಂಬ ಮಾಹಿತಿ ಹೊರಬೀಳುತ್ತಿದ್ದಂತೆ, ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಅಭಿಮಾನಿಗಳು ಹುಚ್ಚೆದ್ದು ಕುಣಿದು ಕುಪ್ಪಳಿಸಿದ್ದಾರೆ. ಅರೆ ಇದೇನಿದು ಹೊಸ ಸುದ್ದಿ ಎನ್ನಬೇಡಿ, ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯಾದ ಅಭಿಪ್ರಾಯ ವ್ಯಕ್ತವಾಗಿದೆ.
ಏಷ್ಯಾಕಪ್’ನಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ ಬಗೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿರುವ ಪ್ರತಿಕ್ರಿಯೆ ಹೀಗಿದೆ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.