
ಮೀರ್’ಪುರ[ಅ.07]: ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಏಷ್ಯಾಕಪ್ ಗೆದ್ದ ಬೆನ್ನಲ್ಲೇ ಅಂಡರ್-19 ಟೀಂ ಇಂಡಿಯಾ ಕೂಡಾ ಶ್ರೀಲಂಕಾ ತಂಡವನ್ನು 144 ರನ್’ಗಳಿಂದ ಮಣಿಸಿ ಆರನೇ ಬಾರಿಗೆ ಅಂಡರ್-19 ಏಷ್ಯಾಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಯಶಸ್ವಿ ಜೈಸ್ವಾಲ್[85]. ಪ್ರಭ್ ಸಿಮ್ರಾನ್ ಸಿಂಗ್ 65*, ಅನೂಜ್ ರಾವುತ್ 57 ಹಾಗೂ ಆಯೂಷ್ ಬದೋನಿ 52* ಆಕರ್ಷಕ ಬ್ಯಾಟಿಂಗ್ ನೆರವಿನಿಂದ ನಿಗದಿತ 50 ಓವರ್’ಗಳಲ್ಲಿ ಕೇವಲ ಮೂರು ವಿಕೆಟ್ ಕಳೆದುಕೊಂಡು 304 ರನ್ ಬಾರಿಸಿತ್ತು. ಇದಕ್ಕುತ್ತರವಾಗಿ ಶ್ರೀಲಂಕಾ ಕಿರಿಯರ ಪಡೆ ಕೇವಲ 160 ರನ್’ಗಳಿಗೆ ಸರ್ವಪತನ ಕಾಣುವುದರೊಂದಿಗೆ ಚೊಚ್ಚಲ ಕಪ್ ಗೆಲ್ಲುವ ಆಸೆಯನ್ನು ಕೈಚೆಲ್ಲಿತು. ಭಾರತದ ಹರ್ಷ್ ತ್ಯಾಗಿ 38 ರನ್ ನೀಡಿ ಲಂಕಾದ ಪ್ರಮುಖ 6 ವಿಕೆಟ್ ಕಬಳಿಸುವ ಮೂಲಕ ಟೀಂ ಇಂಡಿಯಾ ಗೆಲುವನ್ನು ಸುಲಭಗೊಳಿಸಿದರು.
ಈ ಮೊದಲು ಭಾರತ 1989ರಲ್ಲಿ ಚೊಚ್ಚಲ ಅಂಡರ್ 19 ಏಷ್ಯಾಕಪ್ ಜಯಿಸಿತ್ತು, ಆ ಬಳಿಕ ಸತತ ನಾಲ್ಕು ಬಾರಿ[2003, 2012,2013-14 ಹಾಗೂ 2016ರಲ್ಲಿ] ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇನ್ನು 2017ರಲ್ಲಿ ಆಫ್ಘಾನಿಸ್ತಾನ ಚೊಚ್ಚಲ ಬಾರಿಗೆ ಅಂಡರ್ 19 ಏಷ್ಯಾಕಪ್ ಜಯಿಸಿದ ಸಾಧನೆ ಮಾಡಿತ್ತು. ಇದೀಗ ಭಾರತದ ಕಿರಿಯರ ತಂಡ ಮತ್ತೊಮ್ಮೆ ಚಾಂಪಿಯನ್ ಆಗುವ ಮೂಲಕ ದಾಖಲೆಯ ಆರನೇ ಬಾರಿಗೆ ಪ್ರಶಸ್ತಿ ಜಯಿಸಿದ ಸಾಧನೆ ಮಾಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.