
ಲಂಡನ್(ಮೇ.22): ಮುಂದಿನ ತಿಂಗಳಿಂದ ಇಂಗ್ಲೆಂಡ್'ನಲ್ಲಿ ಆರಂಭವಾಗಲಿರುವ ಪ್ರತಿಷ್ಠಿತ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಗಾಗಿ ಪಾಕಿಸ್ತಾನ ತಂಡದಲ್ಲಿ ಸ್ಥಾನ ಪಡೆದಿದ್ದ ಉಮರ್ ಅಕ್ಮಲ್, 2ನೇ ಫಿಟ್ನೆಸ್ ಟೆಸ್ಟ್‌ನಲ್ಲಿಯೂ ವಿಫಲರಾಗಿದ್ದರಿಂದ ತಂಡದಿಂದ ಹೊರಗುಳಿದಿದ್ದಾರೆ.
ಉಮರ್ ಅಕ್ಮಲ್ ಅವರ ಜಾಗದಲ್ಲಿ ಹ್ಯಾರಿಸ್ ಸೋಹೆಲ್ ಅಥವಾ ಉಮರ್ ಅಮೀನ್ ಅವರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಇಂಜುಮಾಮ್ ಉಲ್ ಹಕ್ ಹೇಳಿದ್ದಾರೆ.
ಹ್ಯಾರಿಸ್ ಮತ್ತು ಅಮೀನ್ ಪಾಕಿಸ್ತಾನ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪ್ರಭಾವಿ ಪ್ರದರ್ಶನದಿಂದ ಗಮನಸೆಳೆದಿದ್ದರು. ಫಿಟ್ನೆಸ್ ಟೆಸ್ಟ್'ನಲ್ಲಿ ವೈಫಲ್ಯ ಕಂಡಿರುವ ಉಮರ್ ಅಕ್ಮಲ್ ಶೀಘ್ರದಲ್ಲಿ ಪಾಕಿಸ್ತಾನಕ್ಕೆ ಮರಳಲಿದ್ದಾರೆ ಎಂದು ಪಿಸಿಬಿ ಅಧ್ಯಕ್ಷ ಶಹರಿಯಾರ್ ಖಾನ್ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.