
ಒಲ್ಡ್ ಟ್ರಾಫೋರ್ಡ್(ಜು.03): ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ಆತಿಥೇಯರನ್ನ ಬ್ಯಾಟಿಂಗ್ ಆಹ್ವಾನಿಸಿತು. ಆದರೆ ಕ್ರೀಸಿಗಿಳಿದ ಆರಂಭಿಕರಾದ ಜೋಸ್ ಬಟ್ಲರ್ ಹಾಗೂ ಜೇಸನ್ ರಾಯ್ ಅಬ್ಬರಕ್ಕೆ ಭಾರತೀಯ ಬೌಲರ್‌ಗಳು ಸುಸ್ತಾದರು. ತಾಳ್ಮೆಯ ಆಟವಾಡಿದ ಭಾರತ ಕೊನೆಗೂ ಆರಂಭಿಕರನ್ನ ಬೇರ್ಪಡಿಸುವಲ್ಲಿ ಯಶಸ್ವಿಯಾಗಿದೆ.
20 ಎಸೆತದಲ್ಲಿ 5 ಬೌಂಡರಿ ಮೂಲಕ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಜೇಸನ್ ರಾಯ್ ವಿಕೆಟ್ ಪತನಗೊಂಡಿದೆ. ಉಮೇಶ್ ಯಾದವ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆದ ರಾಯ್ ಪೆವಿಲಿಯನ್ ಸೇರಿದರು. ಇಂಗ್ಲೆಂಡ್ 50 ರನ್‌ಗೆ ಮೊದಲ ವಿಕೆಟ್ ಕಳೆದುಕೊಂಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.