
ಕೊಲಂಬೊ(ಸೆ.12): ಅಂಡರ್ 19 ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಗುರುವಾರ ಇಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ, ಶ್ರೀಲಂಕಾವನ್ನು ಎದುರಿಸಲಿದೆ. ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ್ದು, ತಡವಾಗಿ ಆರಂಭವಾಗುವ ಸಾಧ್ಯತೆಯಿದೆ.
ಅಂಡರ್ 19 ಏಷ್ಯಾಕಪ್: ಪಾಕ್ ವಿರುದ್ಧ ಗೆದ್ದು ಬೀಗಿದ ಭಾರತ
‘ಎ’ ಗುಂಪಿನಲ್ಲಿ ಆಡಿರುವ 3 ಪಂದ್ಯಗಳಲ್ಲಿ 3ರಲ್ಲಿ ಜಯಭೇರಿ ಬಾರಿಸಿ ಅಗ್ರಸ್ಥಾನ ಪಡೆದ ಭಾರತ ತಂಡ, ‘ಬಿ’ ಗುಂಪಿನ 2ನೇ ಸ್ಥಾನಿಯಾಗಿರುವ ಲಂಕಾ ಎದುರು ಗೆಲುವಿನ ಲೆಕ್ಕಾಚಾರದಲ್ಲಿ ಕಣಕ್ಕಿಳಿಯುತ್ತಿದೆ. ಭಾರತ ತಂಡವನ್ನು ಧೃವ್ ಜುರೇಲ್ ಮುನ್ನಡೆಸುತ್ತಿದ್ದಾರೆ.
ಭಾರತ ಎ, ಅಂಡರ್-19 ಕೋಚ್ ಸ್ಥಾನಕ್ಕೆ ದ್ರಾವಿಡ್ ಗುಡ್‌ಬೈ; ಹೊಸಬರಿಗೆ ಮಣೆ!
ಮತ್ತೊಂದು ಸೆಮೀಸ್‌ನಲ್ಲಿ ಆಫ್ಘಾನಿಸ್ತಾನ, ಬಾಂಗ್ಲಾದೇಶ ಎದುರು ಸೆಣಸಲಿದೆ. ಎರಡೂ ಪಂದ್ಯಗಳು ಈ ಮೊದಲು ನಿಗದಿಯಂತೆ ಬೆಳಗ್ಗೆ 9.30ಕ್ಕೆ ನಡೆಯಬೇಕಿತ್ತು. ಆದರೆ ನಿರಂತರವಾಗಿ ಮಳೆ ಸುರಿಯುತ್ತಿದ್ದುರಿಂದ ಕೆಲಕಾಲ ಮುಂದೂಡಲಾಗಿದೆ. ಶನಿವಾರ ಫೈನಲ್ ನಡೆಯಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.