
ರತ್ಲಾಮ್(ಜ.08): ತಮ್ಮ ನೆಚ್ಚಿನ ಕ್ರಿಕೆಟಿಗ ವಿರಾಟ್ ಕೊಹ್ಲಿ, ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್'ನಲ್ಲಿ ಕೇವಲ 5 ರನ್'ಗೆ ಔಟಾದ ರೀತಿಯಿಂದ ಬೇಸರಗೊಂಡ ಬಾಬುಬಲ್ ಬೈರವ್(65) ಎನ್ನುವ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ವಿಚಿತ್ರ ಪ್ರಸಂಗ ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ನಡೆದಿದೆ.
ರೈಲ್ವೆ ಇಲಾಖೆಯ ನಿವೃತ್ತ ನೌಕರರಾಗಿರುವ ಇವರು, ಜ.5ರಂದು ತಮ್ಮ ಮನೆಯ ಕೋಣೆಯಲ್ಲಿ ಭಾರತ-ದ.ಆಫ್ರಿಕಾ ಮೊದಲ ಟೆಸ್ಟ್ ಪಂದ್ಯವನ್ನು ವೀಕ್ಷಿಸುತ್ತಿದ್ದರಂತೆ. ಕೊಹ್ಲಿ ಕೇವಲ 5 ರನ್'ಗೆ ಔಟಾಗುತ್ತಿದ್ದಂತೆ ಬೇಸರಗೊಂಡ ಬಾಬುಬಲ್, ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಅವರ ತಲೆ, ಮುಖ ಹಾಗೂ ಕೈಗಳಿಗೆ ಸುಟ್ಟ ಗಾಯಗಳಾಗಿವೆ. ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ಬಾಬುಬಲ್, ಕೊಹ್ಲಿ ಔಟಾದ ರೀತಿ ತಮಗೆ ಬೇಸರ ತರಿಸಿತು, ಆದ್ದರಿಂದಲೇ ಆತ್ಮಹತ್ಯೆಗೆ ಯತ್ನಿಸಿದೆ ಎಂದಿದ್ದಾರೆ.
ಕೇಪ್'ಟೌನ್'ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೇವಲ 5 ರನ್ ಬಾರಿಸಿ ಮಾರ್ನೆ ಮಾರ್ಕೆಲ್ ಬೌಲಿಂಗ್'ನಲ್ಲಿ ವಿಕೆಟ್ ಕೀಪರ್ ಕ್ವಿಂಟನ್ ಡಿ'ಕಾಕ್'ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.