ವಿಶ್ವಕಪ್ ಟೂರ್ನಿಗೆ ತಯಾರಿ ನಡೆಸುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿಗೆ ನಟಿ ಉರ್ವಶಿ ರೌಟೇಲಾ ಟ್ವೀಟ್ ಮಾಡಿದ್ದಾರೆ. ಉರ್ವಶಿ ಟ್ವೀಟ್‌ನಲ್ಲಿ ಏನಿದೆ.
ಮುಂಬೈ(ಮೇ.25): ವಿಶ್ವಕಪ್ ಟೂರ್ನಿಗಾಗಿ ಟೀಂ ಇಂಡಿಯಾ ಸದ್ಯ ಇಂಗ್ಲೆಂಡ್ ನಾಡಿನಲ್ಲಿ ಅಭ್ಯಾಸ ಪಂದ್ಯ ಆಡುತ್ತಿದೆ. ಪ್ರಶಸ್ತಿ ರೇಸ್‌ನಲ್ಲಿ ಕಾಣಿಸಿಕೊಂಡಿರುವ ಟೀಂ ಇಂಡಿಯಾ ಗೆಲುವಿನ ವಿಶ್ವಾಸದಲ್ಲಿದೆ. ಪ್ರತಿಷ್ಠಿತ ಟೂರ್ನಿಗೆ ಸಜ್ಜಾಗಿರುವ ನಾಯಕ ವಿರಾಟ್ ಕೊಹ್ಲಿ ಹಾಗೂ ಎಂ.ಎಸ್.ಧೋನಿಗೆ ನಟಿ ಉರ್ವಶಿ ರೌಟೆಲಾ ಟ್ವೀಟ್ ಮೂಲಕ ಶುಭಹಾರೈಸಿದ್ದಾರೆ.
ಇದನ್ನೂ ಓದಿ: ವಿಶ್ವಕಪ್ 2019: ಅಭ್ಯಾಸದ ವೇಳೆ ಟೀಂ ಇಂಡಿಯಾ ಕ್ರಿಕೆಟಿಗನಿಗೆ ಗಾಯ- ಆತಂಕದಲ್ಲಿ ತಂಡ!
ವಿರಾಟ್ ಕೊಹ್ಲಿ ಹಾಗೂ ಧೋನಿಗೆ ರೌಟೇಲಾ ಆಲ್ ದಿ ಬೆಸ್ಟ್ ಹೇಳಿದ್ದಾರೆ. ಟ್ವೀಟ್ ಮಾಡೋ ಮೂಲಕ ಶುಭ ಕೋರಿದ್ದಾರೆ. ಈ ಮೂಲಕ ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನವೇ ಇದೀಗ ಬಾಲಿವುಡ್ ಸೆಲೆಬ್ರೆಟಿಗಳ ಕುತೂಹಲ ಇಮ್ಮಡಿಯಾಗಿದೆ.
Wishing & all the best !!!! 🇮🇳 https://t.co/GfBuGGxZl2
— URVASHI RAUTELA (@UrvashiRautela)
ಮೇ.30 ರಿಂದ ವಿಶ್ವಕಪ್ ಟೂರ್ನಿ ಆರಂಭಗೊಳ್ಳುತ್ತಿದೆ. ಜುಲೈ 14 ರಂದು ಲಾರ್ಡ್ಸ್ ಮೈದಾನದಲ್ಲಿನ ಫೈನಲ್ ಪಂದ್ಯದೊಂದಿಗೆ ಅಂತ್ಯಗೊಳ್ಳಲಿದೆ. ಜೂನ್ 5 ರಂದು ಭಾರತದ ಹೋರಾಟ ಆರಂಭಗೊಳ್ಳಲಿದೆ. ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಸೌತ್ಆಫ್ರಿಕಾ ತಂಡವನ್ನು ಎದುರಿಸಲಿದೆ.