
ಲಂಡನ್(ಜು.13): ಅಮೆರಿಕಾದ ಅನುಭವಿ ಆಟಗಾರ್ತಿ, 5 ಬಾರಿ ವಿಂಬಲ್ಡನ್ ಚಾಂಪಿಯನ್ ವೀನಸ್ ವಿಲಿಯಮ್ಸ್ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಸುಲಭವಾಗಿ ಫೈನಲ್ ಪ್ರವೇಶಿಸಿದ್ದಾರೆ. 2009ರ ಬಳಿಕ ಮತ್ತೊಮ್ಮೆ ವೀನಸ್ ವಿಂಬಲ್ಡನ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದ್ದಾರೆ.
ಎರಡನೇ ಸೆಮಿಫೈನಲ್'ನಲ್ಲಿ ವಿಲಿಯಮ್ಸ್, ಬ್ರಿಟನ್'ನ ಜೊಹಾನ ಕೊಂತಾ ವಿರುದ್ಧ 6-4, 6-2 ನೇರ ಸೆಟ್'ಗಳಲ್ಲಿ ನಿರಾಯಾಸವಾಗಿ ಗೆಲುವು ಸಾಧಿಸಿದರು.
20ನೇ ವಿಂಬಲ್ಡನ್ ಟೂರ್ನಿಯಾಡುತ್ತಿರುವ ವೀನಸ್, 9ನೇ ಬಾರಿಗೆ ಫೈನಲ್ ಪ್ರವೇಶಿಸಿದ್ದು 6ನೇ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದಾರೆ.
ಇಂದು ನಡೆದ ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ ಸ್ಪೇನ್'ನ ಗಾರ್ಬೈನ್ ಮುಗುರುಜಾ ಪ್ರಭಾವಿಯಾಟದ ನೆರವಿನಿಂದ ಕಳೆದ ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ಫೈನಲ್'ಗೆ ಲಗ್ಗೆಯಿಟ್ಟಿದ್ದಾರೆ. ಏಕಪಕ್ಷೀಯವಾಗಿ ನಡೆದ ಪಂದ್ಯದಲ್ಲಿ ಸ್ಲೊವಾಕಿಯಾದ ಮಾಗ್ದಲೆನಾ ರೈಬಾರಿಕೊವಾ ವಿರುದ್ಧ 6-1, 6-1 ನೇರ ಸೆಟ್'ಗಳಲ್ಲಿ ಸುಲಭ ಗೆಲುವು ಸಾಧಿಸಿದರು.
ಜುಲೈ 15ರ ಶನಿವಾರ ನಡೆಯುವ ಫೈನಲ್ ಪಂದ್ಯದಲ್ಲಿ ವಿಂಬಲ್ಡನ್ ಟ್ರೋಫಿಗೆ ಯಾರು ಮುತ್ತಿಕ್ಕಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.