
ಲಂಡನ್(ಜು.11) ಅಮೆರಿಕದ ಅನುಭವಿ ಟೆನಿಸ್ ಆಟಗಾರ್ತಿ ವೀನಸ್ ವಿಲಿಯಮ್ಸ್, ಮಹಿಳಾ ಸಿಂಗಲ್ಸ್ ಸೆಮಿಫೈನಲ್ ಪ್ರವೇಶಿಸಿದ್ದಾರೆ.
ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಹಾಲಿ ಫ್ರೆಂಚ್ ಓಪನ್ ಚಾಂಪಿಯನ್ ಲಾತ್ವಿಯಾದ ಎಲೆನಾ ಒಸ್ಟಪೆನ್ಕೊ ವಿರುದ್ಧ ವೀನಸ್ 6-3, 7-5 ನೇರ ಸೆಟ್'ಗಳಲ್ಲಿ ಸುಲಭ ಗೆಲುವು ಸಾಧಿಸಿದರು.
ವಿಂಬಲ್ಡನ್ ಸಿಂಗಲ್ಸ್‌ನಲ್ಲಿ 100ನೇ ಪಂದ್ಯವಾಡಿದ ವೀನಸ್, 86ನೇ ಗೆಲುವು ಸಾಧಿಸಿ ದಾಖಲೆ ಬರೆದರು. 20ನೇ ಬಾರಿಗೆ ವಿಂಬಲ್ಡನ್‌ನಲ್ಲಿ ಆಡುತ್ತಿರುವ ವೀನಸ್, 10ನೇ ಬಾರಿಗೆ ಸೆಮಿಫೈನಲ್'ಗೇರಿದ ಕೀರ್ತಿಗೂ ಪಾತ್ರರಾದರು.
ಮುಗುರುಜಾಗೆ ಜಯ:
ಸ್ಪೇನ್'ನ ಗಾರ್ಬೈನ್ ಮುಗುರುಜಾ ಕಳೆದ ಮೂರು ಆವೃತ್ತಿಗಳಲ್ಲಿ 2ನೇ ಬಾರಿಗೆ ವಿಂಬಲ್ಡನ್ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. 7ನೇ ಶ್ರೇಯಾಂಕಿತೆ ರಷ್ಯಾದ ಸ್ವೆಟ್ಲಾನಾ ಕುಜ್ನೆಟ್'ಸೊವಾ ವಿರುದ್ಧ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮುಗುರುಜಾ 6-3, 6-4 ನೇರ ಸೆಟ್'ಗಳಲ್ಲಿ ನಿರಾಯಾಸವಾಗಿ ಜಯಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.