
ಬೆಂಗಳೂರು[ಸೆ.25]: ವಿಜಯ್ ಹಜಾರೆ ಏಕದಿನ ಟೂರ್ನಿಯಲ್ಲಿ ಶುಭಾರಂಭ ಮಾಡುವ ಗುರಿ ಹೊಂದಿದ್ದ ಕರ್ನಾಟಕ ತಂಡಕ್ಕೆ ನಿರಾಸೆ ಉಂಟಾಗಿದೆ.ಟೂರ್ನಿಯ ಮೊದಲ ಪಂದ್ಯವೇ ಮಳೆಗೆ ಬಲಿಯಾಗಿದೆ.
ಮಂಗಳವಾರ ಇಲ್ಲಿನ ಆಲೂರು ಮೈದಾನದಲ್ಲಿ ಹೈದರಾಬಾದ್ ವಿರುದ್ಧ ನಡೆಯಬೇಕಿದ್ದ ಪಂದ್ಯ, ಟಾಸ್ ಕೂಡ ಕಾಣದೆ ರದ್ದಾಯಿತು. ಸೋಮವಾರ ಸಂಜೆಯಿಂದಲೇ ಸುರಿದಿದ್ದ ಭಾರೀ ಮಳೆಯಿಂದಾಗಿ ಮೈದಾನ ಸಂಪೂರ್ಣ ಒದ್ದೆಯಾಗಿತ್ತು. ಮಂಗಳವಾರ ಬೆಳಗ್ಗೆಯೂ ಕೆಲ ಕಾಲ ಮಳೆ ಬಿದ್ದ ಕಾರಣ, ಮೈದಾನ ಜಲಾವೃತಗೊಂಡಿತ್ತು. ಮೈದಾನ ಸಿಬ್ಬಂದಿ ಸೂಪರ್ ಸಾಪರ್ ಯಂತ್ರ ಬಳಸಿ ಮೈದಾನ ಒಣಗಿಸಲು ಹರಸಾಹಸ ನಡೆಸಿದರೂ, ಫಲ ಸಿಗಲಿಲ್ಲ. ಬೆಳಗ್ಗೆ 11.30ರ ವೇಳೆಗೆ ಪರಿಶೀಲನೆ ನಡೆಸಿದ ಅಂಪೈರ್‌ಗಳು, ಬಳಿಕ ಮಧ್ಯಾಹ್ನ 1.30ಕ್ಕೆ ಅಂತಿಮ ಪರಿಶೀಲನೆ ನಡೆಸಿ ಪಂದ್ಯವನ್ನು ರದ್ದುಗೊಳಿಸಿದರು. ಹೀಗಾಗಿ ಉಭಯ ತಂಡಗಳು ತಲಾ 1 ಅಂಕ ಹಂಚಿಕೊಂಡವು.
ಆಲೂರಿನ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಒಟ್ಟು 3 ಮೈದಾನಗಳಲ್ಲಿದ್ದು, ಇಲ್ಲೇ ನಡೆಯಬೇಕಿದ್ದ ಆಂಧ್ರ-ಛತ್ತೀಸ್‌ಗಢ, ಮುಂಬೈ-ಸೌರಾಷ್ಟ್ರ ‘ಎ’ ಗುಂಪಿನ ಪಂದ್ಯಗಳು ಮಳೆಗೆ ಬಲಿಯಾದವು. ಗುರುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕರ್ನಾಟಕ ತಂಡ ತನ್ನ 2ನೇ ಪಂದ್ಯದಲ್ಲಿ ಜಾರ್ಖಂಡ್ ತಂಡವನ್ನು ಎದುರಿಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.